Site icon PowerTV

ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಸನ್ನಿಹಿತವಾಗಿದೆ. ಸುಮಲತಾ ನಾಳೆಯೇ ಬಿಜೆಪಿ ಸೇರುತ್ತಾರೆ ಅಂತ ಶಾಸಕ ಸಿ.ಎಸ್.ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರೋಕ್ಷವಾಗಿ ಖಚಿತಪಡಿಸಿದ್ದಾರೆ.

ಹೌದು, ವಿಜಯಪುರ ಜಿಲ್ಲೆ ಬಬಲೇಶ್ವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಮಾತುಕತೆ ನಡೆದ ನಂತರ ಸಂಸದೆ ಸಮಲತಾ ಅವರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ಹೇಳಿದ್ದಾರೆ.

ಗೋಶಾಲೆಗಳಿಗೆ ಪ್ರೋತ್ಸಾಹ

ಕಂದಾಯ  ನಿವೇಶನಗಳಲ್ಲಿ ಶಿಕ್ಷಣ, ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲು ಕೊಡಲಾಗಿದೆ. ಅದರರ್ಥ ನಾವು ಎಲ್ಲಾ ಗೋಮಾಳ ಜಮೀನು ನೀಡಿದ್ದೇವೆ ಎಂದಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ : ಕಟೀಲ್ ಸ್ಫೋಟಕ ಹೇಳಿಕೆ : ಕಾಂಗ್ರೆಸ್-ಜೆಡಿಎಸ್ ಮನೆ ಖಾಲಿ!

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ನವರಿಗೆ ಗೋಮಾಳ ಜಾಗ ನೀಡಲಾಗುತ್ತಿದೆ ಎಂದು ಮಾಡಿರುವ ಆರೋಪಕ್ಕೆ ಉತ್ತರಿಸಿ, ಹಿಂದೆ ಅವರು ಅವರಿಗೆ ಬೇಕಾಗಿದ್ದ ಸಂಸ್ಥೆಗಳಿಗೆ ಜಮೀನು ನೀಡಿದ್ದಾರೆ. ಗೋಮಾಳ ಜಾಗವನ್ನು ನಾವೇನು ಕೊಟ್ಟಿಲ್ಲ  ಎಂದು ಸ್ಪಷ್ಟನೆ ನೀಡಿದ್ದಾರೆ.

ಮೋದಿ ಎಂಟ್ರಿಗೂ ಮುನ್ನೆ ಪಕ್ಷ ಸೇರ್ಪಡೆ

ಮಾರ್ಚ್ 12ರಂದು ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟಿಸಲಿದ್ದಾರೆ. ಅದಕ್ಕೂ ಮುಂಚಿತವಾಗಿಯೇ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಪಕ್ಷೇತರ ಸಂಸದೆಯಾದ ಸುಮಲತಾ ಅಂಬರೀಶ್ ಬಿಜೆಪಿ ನಾಯಕಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Exit mobile version