Saturday, August 23, 2025
Google search engine
HomeUncategorizedಇದೇ ಮೊದಲು : ರೈತರ ಮಕ್ಕಳನ್ನು ಮದುವೆಯಾಗುವ ವಧುಗೆ 2 ಲಕ್ಷ ಘೋಷಣೆ

ಇದೇ ಮೊದಲು : ರೈತರ ಮಕ್ಕಳನ್ನು ಮದುವೆಯಾಗುವ ವಧುಗೆ 2 ಲಕ್ಷ ಘೋಷಣೆ

ಬೆಂಗಳೂರು : ಮದುವೆ.. ‘ಮದುವೆ ಮಾಡಿ ನೋಡು, ಮನೆ ಕಟ್ಟಿನೋಡು’ ಎಂಬ ಗಾದೆ ಎಂದೆಂದಿಗೂ ಸತ್ಯ ಹಾಗೂ ವಾಸ್ತವವೂ ಹೌದು. ಮದುವೆ ವಿಷಯಕ್ಕೆ ಬಂದ್ರೆ ರೈತರ ಮಕ್ಕಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಹಾಗೂ ಯಾವ ಹೆಣ್ಣು ಇಷ್ಟಪಡಲ್ಲ ಅನ್ನೋದು ವಿಷಾಧನೀಯ.

ಹೌದು, ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿದ್ದಾರೆ. ಇತ್ತೀಚೆಗೆ ಇದು ದೊಡ್ಡ ಸುದ್ದಿಯೂ ಆಗಿದೆ. ಇದೆ ಒಮ್ಮೆ ತುಮಕೂರು ಜಿಲ್ಲೆಯ ಕೆಲವು ಯುವಕರು ಜಿಲ್ಲಾಧಿಕಾರಿಗಳಿಗೆ ರೈತರ ಮಕ್ಕಳನ್ನು ಯಾವ ಹೆಣ್ಣು ಮದುವೆಯಾಗುತ್ತಿಲ್ಲ. ಇದಕ್ಕೆ ಸರ್ಕಾರ ವಿಶೇಷ ಯೋಜನೆ ಘೋಷಿಸಬೇಕು ಎಂದೂ ಮನವಿ ಮಾಡಿದ್ದರು.

ಈ ಮನವಿ ರಾಜ್ಯ ಸರ್ಕಾರಕ್ಕೆ ಮುಟ್ಟಿದೆಯೋ? ಇಲ್ಲವೋ ಗೊತ್ತಿಲ್ಲ. ಆದರೆ, ರೈತ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ಮನಸ್ಸನ್ನು ಮುಟ್ಟಿದೆ. ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ.

2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ

ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಗಂಡನಿಗೆ ಹಾಲಿನಲ್ಲಿ ಜಾಪಾಳ ಮಾತ್ರೆ ಹಾಕಿ ಕೊಡಿ ಎಂದ ರೇವಣ್ಣ

ಯಾರೂ ಹೆಣ್ಣು ಕೊಡುತ್ತಿಲ್ಲ..!

ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ

ಸಭೆ ಸಮಾರಂಭಗಳಲ್ಲಿ ರೈತರ ಮಕ್ಕಳು ಭೇಟಿಯಾದ ಸಂದರ್ಭದಲ್ಲಿ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಬಗ್ಗೆ ಮನವಿ ಪತ್ರ ನೀಡಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕೋರಿದ್ದರು. ಆ ನಂತರ ವಿಚಾರಣೆ ನಡೆಸಿದಾಗ ಈ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ ಅಂತಾ ತಿಳಿಯಿತು ಎಂದಿದ್ದಾರೆ.

ರೈತರ ಮಕ್ಕಳ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಲಾ 2 ಲಕ್ಷ ರೂ. ನೀಡುವ ಯೋಜನೆ ಜಾರಿಗೆ ತರಲು ತೀರ್ಮಾನಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments