Site icon PowerTV

ಆ.. ಪುಣ್ಯಾತ್ಮನಿಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲೆ ಡಿ.ಕೆ.ಶಿವಕುಮಾರ್. ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ‘ಆ ಪುಣ್ಯಾತ್ಮನಿಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಅವರ ಬಾಯಲ್ಲಿ ಈ ರೀತಿ ಬರುವುದು ಸಹಜ’ ಎಂದು ಕುಟುಕಿದ್ದಾರೆ.

ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ

ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾಯುಕ್ತರು ಸರ್ವಸ್ವತಂತ್ರರು. ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ. ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಿದ್ದಾರೆ. ಇದರಲ್ಲಿ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಹಾಲಿ ಶಾಸಕರಿಗೆ ಬಿಗ್ ಶಾಕ್ : ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ಕರ್ಮ, ಪಾಪ ತೊಳೆದು ಹೋಗುವುದಿಲ್ಲ

ಕಾಂಗ್ರೆಸ್ ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದೆ. ಈ ಥರ ಆಪಾದನೆ ಮಾಡುವ ಮೂಲಕ ಅವರು ಮಾಡಿರುವ ಕರ್ಮ, ಪಾಪ, ಭ್ರಷ್ಟಾಚಾರ ತೊಳೆದು ಹೋಗುವುದಿಲ್ಲ. ಅದು ಮತ್ತೆ ಬಂದೆ ಬರುತ್ತದೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

59 ಪ್ರಕರಣ ಲೋಕಾಯುಕ್ತಕ್ಕೆ ಕೊಡ್ತೇವೆ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಭ್ರಷ್ಟಾಚಾರದ 59 ಪ್ರಕರಣಗಳನ್ನು ಎಸಿಬಿಗೆ ಕೊಟ್ಟದ್ದು, ಲೋಕಾಯುಕ್ತಕ್ಕೆ ಕೊಡುತ್ತೇವೆ. ಅಲ್ಲಿ ಕಾಂಗ್ರೆಸ್ ಬಣ್ಣ ಬಹಳಷ್ಟು ಬಯಲಾಗುತ್ತದೆ ಎಂದರು. ಅಲ್ಲದೆ, ಮಾಡಾಳ್ ವಿರೂಪಾಕ್ಷಪ್ಪ ಮೆರವಣಿಗೆಗೆ ಇದು ಸರಿಯಲ್ಲ ಎಂಬ ಸ್ಪಷ್ಟ ಸೂಚನೆ ಕೊಟ್ಟಿದ್ದಾಗಿ ಹೇಳಿದ್ದಾರೆ.

Exit mobile version