Site icon PowerTV

ನಮ್ಮ ಭದ್ರಕೋಟೆಯಲ್ಲಿ ಅವರು ಒಳ್ಳೆ ಕೆಲ್ಸ ಮಾಡಿದ್ರೆ ಥ್ಯಾಂಕ್ಸ್ : ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನ ಜಿಲ್ಲೆ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಭದ್ರಕೋಟೆಯಲ್ಲಿ ಅವರು ಒಳ್ಳೆಯ ಕೆಲಸಗಳನ್ನು ಮಾಡಿದ್ರೆ, ಮಂಡ್ಯ ಜನತೆ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮಂಡ್ಯ ಅಭಿವೃದ್ಧಿಗೆ ಹಣ ತಂದಿದ್ದೇನೆ ಎಂದಿದ್ದಾರೆ. ಅವರು ಅನುದಾನ ತಂದಿದ್ದರೆ ಅದನ್ನು ಮಂಡ್ಯ ಜಿಲ್ಲೆಯ ಜನ ಹೇಳಬೇಕು. ಈ ಬಗ್ಗೆ ನಾನು ಏನನ್ನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ : ಎಣ್ಣೆ ಅಂಗಡಿ ಬೇಕಿದ್ದರೇ ಉದ್ಘಾಟನೆ ಮಾಡಿಕೊಳ್ಳಲಿ : ರೇವಣ್ಣ ಕಿಡಿ

ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ

ಇನ್ನೂ ಸಂಸದೆ ಸುಮಲತಾ ಬೆಂಬಲ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ವಿಷಯ ಯಾರಿಗೂ ಅಚ್ಚರಿ ಮೂಡಿಸುವ ಸುದ್ದಿ ಅಲ್ಲ. ಇದಕ್ಕೆ ಪ್ರಾಮುಖ್ಯತೆ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಅವರು (ಸುಮಲತಾ ಅಂಬರೀಶ್) ಬಹಳ ದೊಡ್ಡವರಿದ್ದಾರೆ. ಹೀಗಾಗಿ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ. ನಾನು ಪರಿಶುದ್ಧವಾಗಿ ಇದ್ದೇನೆ ಎಂದು ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

Exit mobile version