Saturday, August 23, 2025
Google search engine
HomeUncategorizedಆಸಿಸ್ ನಾಯಕ ಪ್ಯಾಟ್ ಕಮಿನ್ಸ್ ಗೆ ಮಾತೃವಿಯೋಗ

ಆಸಿಸ್ ನಾಯಕ ಪ್ಯಾಟ್ ಕಮಿನ್ಸ್ ಗೆ ಮಾತೃವಿಯೋಗ

ಬೆಂಗಳೂರು : ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಅವರ ತಾಯಿ ಮರಿಯಾ ಇಂದು ಇಹಲೋಕ ತ್ಯಜಿಸಿದ್ದಾರೆ.

ಈ ಬಗ್ಗೆ ಕ್ರಿಕೆಟ್‌ ಆಸ್ಟ್ರೇಲಿಯಾ ಶುಕ್ರವಾರ ಸ್ಪಷ್ಟಪಡಿಸಿದೆ. ದೀರ್ಘಾವಧಿ ಅನಾರೋಗ್ಯದಿಂದ ಬಳಲುತ್ತಿದ್ದ ಪ್ಯಾಟ್ ಕಮಿನ್ಸ್ ಅವರ ತಾಯಿಯ ಆರೋಗ್ಯ ಇತ್ತೀಚೆಗೆ ತೀರಾ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಕ್ಯಾನ್ಸರ್‌ಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಟೆಸ್ಟ್ ಬಳಿಕ ಕಮಿನ್ಸ್ ತಾಯಿ ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಭಾರತ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದರು.

ಪ್ಯಾಟ್ ಕಮಿನ್ಸ್ ಮಾತೃವಿಯೋಗಕ್ಕೆ ಸಂತಾಪ ಸೂಚಿಸಿ ಆಸೀಸ್ ತಂಡ ಅಹ್ಮದಾಬಾದ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಆಡುತ್ತಿದೆ.

ಇದನ್ನೂ ಓದಿ : ಮತ್ತೆ ಆಸ್ಟ್ರೇಲಿಯಾ ತಂಡಕ್ಕೆ ಬ್ಯಾಡ್ ನ್ಯೂಸ್

ಕ್ರಿಕೆಟ್‌ ಆಸ್ಟ್ರೇಲಿಯಾ ಸಂತಾಪ

ಮರಿಯಾ ಕಮಿನ್ಸ್ ಅವರ ನಿಧನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಂತಾಪ ಸೂಚಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ್ದು, ತಡರಾತ್ರಿ ಮರಿಯಾ ಕಮಿನ್ಸ್ ನಿಧನದಿಂದ ನಮಗೆ ತುಂಬಾ ದುಖಃವಾಗಿದೆ. ಆಸ್ಟ್ರೇಲಿಯನ್‌ ಕ್ರಿಕೆಟ್ ಪರವಾಗಿ, ನಾವು ಪ್ಯಾಟ್, ಕಮ್ಮಿನ್ಸ್ ಕುಟುಂಬ ಮತ್ತು ಅವರ ಸ್ನೇಹಿತರಿಗೆ ಸಂತಾಪ ಸೂಚಿಸುತ್ತೇವೆ.

ಕಮಿನ್ಸ್ ಅವರ ತಾಯಿಗೆ ಗೌರವ ಸೂಚಿಸುವ ಸಲುವಾಗಿ ಆಸ್ಟ್ರೇಲಿಯಾ ಆಟಗಾರರು ನಾಲ್ಕನೇ ಟೆಸ್ಟ್ ಎರಡನೇ ದಿನ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕೆ ಇಳಿಯಲಿದ್ದಾರೆ ಎಂದು ಟ್ವೀಟ್‌ ನಲ್ಲಿ ಉಲ್ಲೇಖ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments