Site icon PowerTV

ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದರಾದ ಆರ್. ಧ್ರುವನಾರಾಯಣ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ ಅವರು ನನಗೆ ಬಹಳ ಆತ್ಮೀಯ ಸ್ನೇಹಿತರಾಗಿದ್ದರು. ಅವರು ವಿರೋಧ ಪಕ್ಷದಲ್ಲಿದ್ದರು ಕೂಡ ನಾಡಿನ ಅಭಿವೃದ್ಧಿ ವಿಚಾರದ ಬಗ್ಗೆ, ತಮ್ಮ ಸಮುದಾಯದ ಏಳಿಗೆ ಬಗ್ಗೆ ನನ್ನೊಂದಿಗೆ ಆಗಾಗ ಚರ್ಚೆ ನಡೆಸುತ್ತಿದ್ದರು. ಸಂಸತ್ತಿನಲ್ಲಿಯೂ ಬಹಳ ಪರಿಣಾಮಕಾರಿಯಾಗಿ ಮಾತನಾಡಿದ್ದರು ಎಂದು ಕಂಬನಿ ಮಿಡಿದಿದ್ದಾರೆ.

ಆರ್. ಧ್ರುವನಾರಾಯಣ ಅವರ ಅಂತ್ಯಕ್ರಿಯೆಗೆ ಪೊಲೀಸ್ ಗೌರವವನ್ನು ಸಲ್ಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.

2 ಬಾರಿ ಶಾಸಕ, 2 ಬಾರಿ ಸಂಸದ

1983ರಲ್ಲಿ ಪಕ್ಷದ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದ್ದ ಆರ್. ಧ್ರುವನಾರಾಯಣ ಅವರು, ಕೊಳ್ಳೇಗಾಲ ಹಾಗೂ  ಸಂತೆಮರದಿಂದ ಎರಡು ಬಾರಿ ಶಾಸಕರಾಗಿದ್ದರು. ಅಲ್ಲದೇ, ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Exit mobile version