Site icon PowerTV

ತೀವ್ರ ರಕ್ತಸ್ರಾವದಿಂದ ಧ್ರುವನಾರಾಯಣ ಮೃತ

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ (61) ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.

ಕೂಡಲೇ ಅವರು ಡ್ರೈವರ್ ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಧ್ರುವನಾರಾಯಣಗೆ ಚಿಕಿತ್ಸೆ ನೀಡಿದ ವೈದ್ಯ ಮಂಜುನಾಥ್, ಧ್ರುವನಾರಾಯಣ ತೀವ್ರ ರಕ್ತಸ್ರಾವ ಆಗಿ ಮೃತಪಟ್ಟಿದ್ದಾರೆ. ನಾವು ನೋಡಿದಾಗ ಧ್ರುವನಾರಾಯಣ ಕೋಮಾ ಸ್ಥಿತಿಯಲ್ಲಿದ್ದರು ಎಂದು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಿಂದ ರಾಜಕೀಯ ಪ್ರವೇಶ

ಮೈಸೂರಿನ ವಿಜಯನಗರದ ಮನೆಯಲ್ಲಿ ವಾಸವಾಗಿದ್ದರು. ಚಾಮರಾಜನಗರ ಜಿಲ್ಲೆಯಿಂದ ರಾಜಕೀಯ ಪ್ರವೇಶ ಮಾಡಿದ್ದರು. 1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಇವರು 1986ರಲ್ಲಿ ಎನ್​ಎಸ್​ಯುಐ ಬೆಂಗಳೂರು​ ಘಟಕದ ಅಧ್ಯಕ್ಷರಾಗಿದ್ದರು.

ನಂಜನಗೂಡಿನಿಂದ ಸ್ಪರ್ಧೆಗೆ ಸಿದ್ಧತೆ

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೆಯೇ, ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.

Exit mobile version