Site icon PowerTV

ಹೀಗಿತ್ತು ಧ್ರುವನಾರಾಯಣ ರಾಜಕೀಯ ಹಾದಿ..!

ಬೆಂಗಳೂರು : ಮಾಜಿ ಸಂಸದ ಹಾಗೂ ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಓರ್ವ ಸಾಮಾನ್ಯ ಕಾರ್ಯಕರ್ತರಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದರು. 2004ರಲ್ಲಿ ಸಂತೆಮರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರು, ಕೇವಲ 1 ಮತದಿಂದ ಗೆಲುವು ಪಡೆದು ದಾಖಲೆ ಸೃಷ್ಟಿಸಿದ್ದರು.

2018ರಲ್ಲಿ ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲಿನ ಬಳಿಕವೂ ಸಕ್ರಿಯರಾಗಿದ್ದರು. ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲಿ ಉತ್ತಮ ಹೆಸರು ಪಡೆದುಕೊಂಡಿದ್ದರು.

ಇದನ್ನೂ ಓದಿ : ತೀವ್ರ ರಕ್ತಸ್ರಾವದಿಂದ ಧ್ರುವನಾರಾಯಣ ಮೃತ

ಧ್ರುವನಾರಾಯಣ ರಾಜಕೀಯ ಜರ್ನಿ

1961ರ ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ ಜನನ.

ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (62) ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಕ್ರಿಯರಾಗಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದರು.

Exit mobile version