Site icon PowerTV

‘ಧ್ರುವ’ನಾರಾಯಣ ಬದುಕು ಅರ್ಧದಲ್ಲೇ ಮೊಟಕಾಗಿದ್ದು ನಾಡಿಗೆ ನಷ್ಟ : ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಂಸದ ಹಾಗೂ ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಅವರ ಅಗಲಿಕೆಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಆರ್. ಧ್ರುವನಾರಾಯಣ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡಿದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ತೀವ್ರ ರಕ್ತಸ್ರಾವದಿಂದ ಧ್ರುವನಾರಾಯಣ ಮೃತ

ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬದುಕು ಶಾಶ್ವತವಾಗಿ ನೆನಪಲ್ಲಿರುತ್ತೆ

ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

Exit mobile version