Saturday, August 23, 2025
Google search engine
HomeUncategorizedಫೇಡಾ ನಗರಿ ಧಾರವಾಡಕ್ಕೆ ಪ್ರಧಾನಿ ಮೋದಿ ಆಗಮನ

ಫೇಡಾ ನಗರಿ ಧಾರವಾಡಕ್ಕೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದಲ್ಲಿ ಮೈಸೂರಿಂದ ಹುಬ್ಬಳ್ಳಿ  ಏರ್​ಪೋರ್ಟ್​​ಗೆ ಬಂದಿದ್ದು, ಇದೀಗ ಸೇನಾ ಹೆಲಿಕಾಪ್ಟರ್​ನಲ್ಲಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್​ನಲ್ಲಿ ಧಾರವಾಡಕ್ಕೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿತಿನ್ ಗಡ್ಕರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಧಾನಿ ಮೋದಿಯನ್ನು ಸ್ವಾಗತಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ಪ್ರಧಾನಿ ಮೋದಿ ಧಾರವಾಡದತ್ತ ಬಂದಿದ್ದಾರೆ.

ಇದನ್ನೂ ಓದಿ : ಮೋದಿ ಸಮಾಧಿ ನಿರ್ಮಿಸಲು ಪ್ಲಾನ್

20 ಕೋಟಿ ವೆಚ್ಚದ ಉದ್ದದ ಪ್ಲಾಟ್ ಫಾರಂ

ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಜಗತ್ತಿನ ಅತಿ ಉದ್ದದ ಪ್ಲಾಟ್ ಫಾರಂಗೆ ಪ್ರಧಾನಿ ನರೇಮದ್ರ ಮೋದಿ ಅವರು ಕೆಲವೇ ಕ್ಷಣಗಳಲ್ಲಿ ಚಾಲನೆ ನೀಡಲಿದ್ದಾರೆ. ಸಮಾರು 20 ಕೋಟಿ ವೆಚ್ಚದಲ್ಲಿ 1,507 ಮಿಟರ್ ಉದ್ದದ ಪ್ಲಾಟ್ ಫಾರಂ ಆಗಿದೆ. ಏಕಕಾಲಕ್ಕೆ ಎರದು ರೈಲುಗಳು ವಿರುದ್ಧ ದಿಕ್ಕಿಗೆಸಂಚರಿಸಬಹುದಾಗಿದೆ. ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲೂ ಸೇರಿಸಲಾಗಿದೆ.

ಪ್ರಧಾನಿಗೆ ಕಲಘಟಗಿ ತೊಟ್ಟಿಲು ಗಿಫ್ಟ್​​

ಕಲಘಟಗಿ ಬಣ್ಣದ ತೊಟ್ಟಿಲು ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ರಾಜಕಾರಣಿಗಳು, ಸಿನಿಮಾ‌ ಸೆಲೆಬ್ರಿಟಿಗಳು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಈ ನಿಟ್ಟಿನಲ್ಲಿ ಈಗ ಕಲಘಟಗಿ ತೊಟ್ಟಿಲು ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ.

ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಲೋಕಾರ್ಪಣೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮೋದಿಗೆ ಕಲಘಟಗಿಯ ತೊಟ್ಟಿಲು ಉಡುಗೊರೆಯಾಗಿ ನೀಡಲಾಗಿದೆ. ಹಾವೇರಿಯ ಯಾಲಕ್ಕಿ ಮಾಲೆ, ಸಿದ್ಧಾರೂಢರ ಮೂರ್ತಿ, ಕಸೂತಿಯ ಶಾಲ್ ಸೇರಿದಂತೆ ಹಲವಾರು ಉಡುಗೊರೆ ನೀಡಲಾಯಿತು. ಹಲವು ತಲೆ ಮಾರಿನಿಂದ ತೊಟ್ಟಿಲು ಮಾಡುವ ಕಾಯಕ ಮಾಡಿಕೊಂಡು ಬಂದಿರುವ ಕುಟುಂಬದ ಮಾರುತಿ ಬಡಿಗೇರ, ತಿಪ್ಪಣ್ಣ ಬಡಿಗೇರ, ಹರೀಶ, ಶ್ರೀಶೈಲ ಬಡಿಗೇರ ನರೇಂದ್ರ ಮೋದಿಗಾಗಿ ತೊಟ್ಟಿಲು ತಯಾರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments