Site icon PowerTV

ಹೀಗಿರಲಿದೆ ಕರುನಾಡಲ್ಲಿ ಪ್ರಧಾನಿ ಮೋದಿ ಮೇನಿಯಾ..!

ಬೆಂಗಳೂರು : ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆ, ಮಂಡ್ಯ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆಗೆ ಕ್ಷಣಗಣನೆ ಶುರುವಾಗಿದೆ. ಪ್ರಧಾನಿ ನರೇಮದ್ರ ಮೋದಿ ಇಂದು ರಾಜ್ಯದಲ್ಲಿ ಹೊಸ ಆರಂಭಕ್ಕೆ ಮುನ್ನುಡಿ ಬರೆಯಲಿದ್ದಾರೆ.

ಮೋದಿ ಆಗಮನದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಫುಲ್ ಜೋಶ್ ನಲ್ಲಿದೆ. ಮುಮಬರುವ ವಿಧಾನಸಭಾ ಚುನಾವಣೆಯನ್ನೇ ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ, ಸುಮಾರು 16,000 ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಇಂದು (ಭಾನುವಾರ) ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿಯವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ : ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಹೀಗಿರುತ್ತೆ ಪ್ರಧಾನಿ ಮೋದಿ ಪ್ರವಾಸ

Exit mobile version