Site icon PowerTV

ಸಿಎಂ ತವರಲ್ಲಿ ಬಿಜೆಪಿ ನಾಯಕನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹೌದು, ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್​ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಿನ್ನೆ (ಮಂಗಳವಾರ) ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ತಡರಾತ್ರಿವರೆಗೂ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸೀರೆ, ತಟ್ಟೆ, ಲೋಟ ವಶ

ಆರ್. ಶಂಕರ್‌ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆರ್. ಶಂಕರ್‌ ಭಾವಚಿತ್ರ ಇರುವ ಸೀರೆ ಬಾಕ್ಸ್,‌ ತಟ್ಟೆ, ಲೋಟ ಹಾಗೂ ವಿದ್ಯಾರ್ಥಿಗಳಿಗೆ ತಂದಿರುವ ಸ್ಕೂಲ್‌ ಬ್ಯಾಗ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.

8 ಕೊಟಿ ರೂ. ವೆಚ್ಚದ ವಸ್ತುಗಳು ಪತ್ತೆ

ಸುಮಾರು 8 ಕೊಟಿ ರೂ. ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ ಜಿಎಸ್ ಟಿ ಬಿಲ್ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್.ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್ ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.

ಇನ್ನು ಚುನಾವಣೆ ನಿಯಮ ಉಲ್ಲಂಘಣೆ ಮಾಡಿದ್ದಾರಾ ಎಂಬುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಸಹ ದಾಳಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಕೊರ್ಟ್ ಮುಂದೆ ಹಾಜರುಪಡಿಸಿ, ಒಪ್ಪಿಗೆ ಮೇರೆಗೆ FIR ದಾಖಲು ಮಾಡಲಾಗುವುದು ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಮಾಹಿತಿ ನೀಡಿದ್ದಾರೆ.

ಇನ್ನು ಆರ್.ಶಂಕರ್ ನಿವಾಸದ ಮೇಲೆ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಆಗಮಿಸಿದ ಮಾಜಿ ಸಚಿವರ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Exit mobile version