Site icon PowerTV

ಮತ್ತೊಮ್ಮೆ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡಿ : ಬಿಜೆಪಿ ಸಿಎಂ

ಬೆಂಗಳೂರು: ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮ ಅವರು ಕರೆ ಕೊಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕುರುಗೋಡಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ. ಈ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿ, ಮತ್ತೊಮ್ಮೆ ನರೇಂದ್ರ ಮೋದಿಜಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಡಾ. ಹಿಮಂತ ಬಿಸ್ವ ಶರ್ಮ ತಿಳಿಸಿದ್ದಾರೆ.

ಬಿಜೆಪಿಯನ್ನು ಬೆಂಬಲಿಸಿ, ಗೆಲ್ಲಿಸಿ

ಕರ್ನಾಟಕವು ಅಭಿವೃದ್ಧಿ ಪಥದಲ್ಲಿ ಸಾಗಲು ಡಬಲ್ ಎಂಜಿನ್ ಸರ್ಕಾರ ಅಗತ್ಯವಿದೆ. ಇತ್ತೀಚೆಗೆ ನಡೆದ ಗುಜರಾತ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ರಾಜ್ಯವು ಸಮಗ್ರ ಅಭಿವೃದ್ಧಿ ಹೊಂದಲು ಬಿಜೆಪಿಯನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಸಂಸದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹಾಗೂ ಮತ್ತಿತರ ನಾಯಕರು ಇದ್ದರು.

Exit mobile version