Site icon PowerTV

Wow : ನೊಬೆಲ್ ಪ್ರಶಸ್ತಿ ರೇಸ್ ನಲ್ಲಿ ಪ್ರಧಾನಿ ಮೋದಿ?

ಬೆಂಗಳೂರು : ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯ ಸ್ಪರ್ಧಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದುಬಂದಿದೆ.

ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಅಸ್ಲೆ ತೋಜೆ ಈ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಅವರ ಸರ್ಕಾರವನ್ನು ಹೊಗಳಿದ್ದಾರೆ.

ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಜಾಗತಿಕ ಶಾಂತಿಗೆ ಅವರ ಕೊಡುಗೆಯನ್ನು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ನಾನು ಮೋದಿ ದೊಡ್ಡ ಅಭಿಮಾನಿ

ಪ್ರಧಾನಿ ಮೋದಿ ವಿಶ್ವದ ಶಾಂತಿಯ ಅತ್ಯಂತ ವಿಶ್ವಾಸಾರ್ಹ ಮುಖ. ಅಷ್ಟೇ ಅಲ್ಲದೆ ತನ್ನನ್ನು ತಾನು ಭಾರತದ ಪ್ರಧಾನ ಮಂತ್ರಿಯ ದೊಡ್ಡ ಅಭಿಮಾನಿ ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಆಸ್ಲೆ ಟೋಜೆ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಆಡಳಿತವನ್ನು ಶ್ಲಾಘಿಸಿದ ಅವರು, ಪ್ರಧಾನಿ ಮೋದಿ ಕದನ ಕಣದಲ್ಲಿರುವ ಅಥವಾ ಯುದ್ಧ ಮಾಡುತ್ತಿರುವ  ದೇಶಗಳ ನಡುವೆ ಯುದ್ಧವನ್ನು ನಿಲ್ಲಿಸಿ ಶಾಂತಿ ಸ್ಥಾಪಿಸುವ ಅತ್ಯಂತ ವಿಶ್ವಾಸಾರ್ಹ ನಾಯಕ. ಪ್ರಧಾನಿ ಮೋದಿಯವರ ನೀತಿಯಿಂದಾಗಿ ಭಾರತವು ಶ್ರೀಮಂತ ಮತ್ತು ಶಕ್ತಿಯುತ ದೇಶವಾಗುತ್ತಿದೆ ಎಂದು ಹೇಳಿದ್ದಾರೆ.

Exit mobile version