Site icon PowerTV

ಕನ್ನಡ ಮಾತನಾಡಿದ ಅಧಿಕಾರಿಯನ್ನು ನಿಂದಿಸಿದ ನಟ

ಬೆಂಗಳೂರು : ಕನ್ನಡ ಮಾತನಾಡಿದ ಅಧಿಕಾರಿಗೆ ಬಾಲಿವುಡ್‌ ನಟ ಸಲ್ಮಾನ್‌ ಯೂಸೂಫ್‌ ಖಾನ್‌ ನಿಂದನೆ ಮಾಡಿರುವ ಘಟನೆ ನಡೆದಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲಿ ಸಂಭಾಷಿಸಿದ ಬಾಲಿವುಡ್‌ ನಟ ಹಾಗೂ ನೃತ್ಯ ಸಂಯೋಜಕ ಸಲ್ಮಾನ್‌ ಯೂಸೂಫ್‌ ಖಾನ್‌ ನಿಂದಿಸಿದ್ದಾರೆ.

ದುಬೈಗೆ ತೆರಳಲು ಮಂಗಳವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಲ್ಮಾನ್‌ ಭದ್ರತಾ ತಪಾಸಣೆ ಮಾಡಿಸುತ್ತಿದ್ದಾಗ ಅವರ ಪಾಸ್‌ಪೋರ್ಟ್ ನೋಡಿದ ಅಧಿಕಾರಿ ಬೆಂಗಳೂರಿನವರೇ ಆದ ಸಲ್ಮಾನ್ ಜೊತೆ ಕನ್ನಡದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ : ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಗಲ್ರಾನಿ

‘ನನಗೆ ಕನ್ನಡ ಬರುವುದಿಲ್ಲ’

ಆಗ ನಟ ‘ನನಗೆ ಕನ್ನಡ ಬರುವುದಿಲ್ಲ’ ಎಂದು ಹೇಳಿದ್ದಾರೆ. ‘ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಲ್ಲಿದ್ದ ಅಧಿಕಾರಿಯೊಬ್ಬರು ಕನ್ನಡದಲ್ಲಿ ಮಾತನಾಡುವಂತೆ ನನಗೆ ಒತ್ತಾಯಿಸಿದ್ದಾರೆ. ಈ ಅಧಿಕಾರಿ ಅನಕ್ಷರಸ್ಥ ಪಶು. ಇಂಥ ಅನಕ್ಷರಸ್ಥರಿಂದಲೇ ದೇಶ ಅಭಿವೃದ್ಧಿ ಆಗುತ್ತಿಲ್ಲ’ ಎಂದು ನಿಂದಿಸಿದ ವಿಡಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Exit mobile version