Sunday, August 24, 2025
Google search engine
HomeUncategorizedರಾಹುಲ್ ಕ್ಷಮೆ ಕೇಳಿದ್ರ ಮಾತ್ರ ಮಾತನಾಡಲು ಅವಕಾಶ : ಬಿಜೆಪಿ ಪಟ್ಟು

ರಾಹುಲ್ ಕ್ಷಮೆ ಕೇಳಿದ್ರ ಮಾತ್ರ ಮಾತನಾಡಲು ಅವಕಾಶ : ಬಿಜೆಪಿ ಪಟ್ಟು

ಬೆಂಗಳೂರು : ಲಂಡನ್​ನಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕ ಮಾಡಿದ್ದಕ್ಕಾಗಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಲೇಬೇಕು. ಅಲ್ಲಿಯವರೆಗೆ ಸಂಸತ್ತಿನಲ್ಲಿ ಭಾಷಣ ಮಾಡಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ಸಂಸದರು ಪಟ್ಟು ಹಿಡಿದಿದ್ದಾರೆ.

ಲಂಡನ್ ನ ಕೇಂಬ್ರಿಡ್ಜ್​ ವಿಶ್ವವಿದ್ಯಾಲಯ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ರಾಹುಲ್ ಗಾಂಧಿ ಭಾರತವನ್ನು ಅವಮಾನಿಸಿದ್ದಾರೆ. ಹೀಗಾಗಿ ಅವರು ಸದನದ ಒಳಗೂ ಹೊರಗೂ ಕ್ಷಮೆ ಕೇಳಲೇಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ. ಇದೇ ಕಾರಣಕ್ಕೆ ಕಳೆದ ಐದು ದಿನಗಳಿಂದ ಸಂಸತ್ತಿನಲ್ಲಿ ಯಾವುದೇ ಕಲಾಪಗಳು ನಡೆಯಲು ಸಾಧ್ಯವಾಗುತ್ತಿಲ್ಲ.

ಸದಸ್ಯತ್ವವವನ್ನೇ ವಜಾ ಮಾಡಬೇಕು

ಈ ಮಧ್ಯೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ ಹೇಳಿಕೆಗಳ ಪರಿಶೀಲನೆಗೆ ವಿಶೇಷ ಸಮಿತಿ ರಚಿಸುವಂತೆ ಸ್ಪೀಕರ್ ಗೆ ಮನವಿ ಮಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್​​ ಪಕ್ಷವು ಸಂಸತ್ತಿಗೆ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಮಾನ ಎಸಗಿದೆ. ಹಾಗಾಗಿ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವವನ್ನೇ ವಜಾ ಮಾಡಬೇಕು ಎಂದು ದುಬೆ ಒತ್ತಾಯಿಸಿದ್ದಾರೆ.

ಕಳೆದ ಗುರುವಾರ ಲೋಕಸಭೆಗೆ ಆಗಮಿಸಿದ್ದ ರಾಹುಲ್ ಗಾಂಧಿ, ತನಗೆ ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಮನವಿ ಮಾಡಿದ್ದರು. ಆದರೆ, ಲೋಕಸಭೆಯಲ್ಲಿ ತೀವ್ರ ಕೋಲಾಹಲ ಗದ್ದಲ ಉಂಟಾದ ಕಾರಣ, ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶವೇ ಸಿಕ್ಕಿಲ್ಲ. ಪ್ರಸಕ್ತ ಮುಂದಿನ ಸೋಮವಾರದವರೆಗೂ ಲೋಕಸಭೆ ಕಲಾಪವನ್ನು ಮುಂದೂಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments