Site icon PowerTV

ಖ್ಯಾತ ಪತ್ರಕರ್ತ ಪ್ರಸಾದ್​​ ಹೆಗ್ಡ ನಿಧನ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪತ್ರಕರ್ತ ಪ್ರಸಾದ್ ಹೆಗ್ಡೆ (45) ಶನಿವಾರ ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.

ಮೃತ ಪ್ರಸಾದ್ ಹೆಗ್ಡೆ ಮೂಲತಃ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಬೆಳಗುಂದ್ಲಿಯವರು. ಸದ್ಯ ರಾಜ್ ನ್ಯೂಸ್ ಔಟ್ ಪುಟ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೈಸೂರು ದಿಗಂತ ಪತ್ರಿಕೆಯಲ್ಲಿ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಪ್ರಸಾದ್, ಬಳಿಕ ಹಲೋ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯಲ್ಲಿ ಕೆಲ ಮಾಡಿದ್ದಾರೆ. ಬಳಿಕ ಬೆಂಗಳೂರಿಗೆ ಬಂದು ಎಲೆಕ್ಟ್ರಾನಿಕ್ (ದೃಶ್ಯ) ಮಾಧ್ಯಮದಲ್ಲಿ ವೃತ್ತಿ ಮುಂದುವರಿಸಿದ್ದರು. ಕಸ್ತೂರಿ, ಪ್ರಜಾ ಟಿವಿ, ದಿಗ್ವಿಜಯ ನ್ಯೂಸ್, ನ್ಯೂಸ್ ಫಸ್ಟ್ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಪ್ರಸಾದ್ ಹೆಗ್ಡೆ ಅವರ ನಿಧನಕ್ಕೆ ಗಣ್ಯರು, ಹಿರಿಯ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

Exit mobile version