Site icon PowerTV

ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋದ್ರೆ ಒಳ್ಳೆಯದು : ಅಶೋಕ್ ವ್ಯಂಗ್ಯ

ಬೆಂಗಳೂರು : ಪದೇ ಪದೆ ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದೀಗ ಕ್ಷೇತ್ರ ಸಂಕಷ್ಟ ಎದುರಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ ಎಂದು ಕುಟುಕಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ, ಬಾಂಗ್ಲದೇಶಕ್ಕೆ  ಹೋದರೆ ಒಳ್ಳೆಯದು ಎಂದು ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ.

ರಾಜ್ಯದ 224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ. ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ : ನಮಗೆ ಮೈತ್ರಿ ಪ್ರಪೋಸಲ್ ಬಂದಿದೆ : ಡಿಕೆಶಿ ಸ್ಫೋಟಕ ಹೇಳಿಕೆ

ಬೇರೆ ರಾಜ್ಯ ನೋಡಿಕೊಂಡ್ರೆ ಒಳ್ಳೆಯದು

ಈಗಾಗಲೇ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರ ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ ಗೆಲ್ಲುವುದೂ ಕಷ್ಟವಿದೆ. ಆದ್ದರಿಂದ ಕರ್ನಾಟಕದ 224 ಕ್ಷೇತ್ರಗಳು ಸಿದ್ದರಾಮಯ್ಯನವರಿಗೆ ಒಳ್ಳೆಯದಲ್ಲ. ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್. ಡಿ.ಕೆ.ಶಿವಕುಮಾರ್ ಅವರನ್ನು ಸೋಲಿಸುತ್ತಾರೆ ಎಂದು ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ.

Exit mobile version