Site icon PowerTV

ನಮಗೆ ಮೈತ್ರಿ ಪ್ರಪೋಸಲ್ ಬಂದಿದೆ : ಡಿಕೆಶಿ ಸ್ಫೋಟಕ ಹೇಳಿಕೆ

ಬೆಂಗಳೂರು : ಬಿಜೆಪಿಗಿಂತ ಮೊದಲೇ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ತಿಳಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಮಲ್ಲಿಕಾರ್ಜುನ ಮನೆಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ರಾಹುಲ್ ಗಾಂಧಿ ಭಾರತ್ ಜೋಡೋ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿದ್ದಾರೆ. ಹಾಗಾಗಿ ರಾಹುಲ್ ಭೇಟಿ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಮಹಾತ್ಮ ಗಾಂಧಿ ಭೇಟಿ ನೀಡಿದ್ದ ಜಾಗಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಟಿಕೆಟ್ ವಿಚಾರ ಎಲ್ಲವೂ ಚರ್ಚೆ ಆಗಿದೆ. ಶೀಘ್ರದಲ್ಲೇ ಎಐಸಿಸಿ ಘೋಷಣೆ ಮಾಡಲಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್

ರಾಹುಲ್ ಗಾಂಧಿ ಬಂದು ಹೋದ ಮೇಲೆ ಗೊತ್ತಾಗಲಿದೆ. ಆದಷ್ಟು ಬೇಗೆ ಪಟ್ಟಿ ಬಿಡುಗಡೆ ಆಗುತ್ತೆ. ಬಿಜೆಪಿಗಿಂತ ಮೊದಲೇ ಬಿಡುಗಡೆ ಆಗಲಿದೆ. ಏನೇನು, ಎಷ್ಟು ಒಮ್ಮತ ಇದೆ ಎಂಬುದೆಲ್ಲ ಕ್ಲಿಯರ್ ಆಗಿದೆ. ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು.

ಯಾವುದೇ ಚುನಾವಣಾ ಪೂರ್ವ ಮೈತ್ರಿ ಇಲ್ಲ. ಒಂದು ಕ್ಷೇತ್ರದಲ್ಲಿ ಮೈತ್ರಿ ಬಗ್ಗೆ ಪ್ರಪೋಸಲ್ ಬಂದಿದೆ. ಅದರ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

Exit mobile version