Site icon PowerTV

ಆ ದಿನಗಳು ಖ್ಯಾತಿಯ ನಟ ಚೇತನ್ ಬಂಧನ

ಬೆಂಗಳೂರು : ಉರಿಗೌಡ-ನಂಜೇಗೌಡ ಸಿನಿಮಾ ವಿವಾದ ಹಿನ್ನೆಲೆಯಲ್ಲಿ ಕೆಟ್ಟದಾಗಿ ಪ್ರತಿಕ್ರಿಯೆ ನೀಡಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರ ಠಾಣೆ ಪೊಲೀಸರು ಚೇತನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಶಿವಕುಮಾರ್ ಎಂಬುವರು ಚೇತನ್ ವಿರುದ್ಧ ದೂರು ನೀಡಿದ್ದರು.

ಚೇತನ್ ಪೋಸ್ಟ್ ವಿರುದ್ಧ ಹಿಂದೂಪರ ಸಂಘಟನೆಗಳು ದೂರು ನೀಡಿದ್ದವು. ಇದರನ್ವಯ ಐಪಿಸಿ ಸೆಕ್ಷನ್ 295(ಎ), 505(ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಸದ್ಯ ನಟ ಚೇತನ್ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

295 ಎ-ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು‌ ಮಾಡುವುದು. 505 ಬಿ-ಯಾವುದೇ ಧರ್ಮದ ಆಚರಣೆಯ ಬಗ್ಗೆ ಅವಹೇಳನಕಾರಿ ಪ್ರತಿಕ್ರಿಯೆ. ಈ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

Exit mobile version