Site icon PowerTV

ನಾಳೆಯೇ ಸಿದ್ದರಾಮಯ್ಯ ದೊಡ್ಡ ನಿರ್ಧಾರ

ಬೆಂಗಳೂರು : ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ಡ ನಿರ್ದಾರ ತೆಗೆದುಕೊಳ್ಳಲಿದ್ದಾರೆ.

ಕೋಲಾರ ಕ್ಷೇತ್ರದ ಕಾಂಗ್ರೆಸ್ ನಾಯಕರು ಹಾಗೂ ಸಿದ್ದು ಕುಟುಂಬದ ಸದಸ್ಯರ ಜೊತೆಗೆ ಚರ್ಚೆ ನಡೆಸಿ ನಾಳೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೋಲಾರದಲ್ಲಿ ಸ್ಪರ್ಧೆ ಬೇಡ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕ್ಷೇತ್ರ ಸಂಕಟ ಎದುರಾಗಿದೆ. ಸಿದ್ದರಾಮಯ್ಯ ಅಂತಿಮ ನಿರ್ಧಾರ ತೆಗೆದುಕೊಳ್ಳುವ ತನಕ ಕಾದುನೋಡಲು ಎಐಸಿಸಿ ಹಾಗೂ ಕೆಪಿಸಿಸಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಒಟ್ನಲ್ಲಿ, ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ಇನ್ನೂ ಫೈನಲ್​ ಆಗಿಲ್ಲ. 2018ರಲ್ಲಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲು ಸಿದ್ದರಾಮಯ್ಯ ಅಲೆದಾಡುವಂತೆ ಮಾಡಿದೆ. ಅಳೆದು ತೂಗಿ ಸಿದ್ದರಾಮಯ್ಯ ಅವರು ಕ್ಷೇತ್ರ ಫೈನಲ್ ಮಾಡಲಿದ್ದಾರೆ ಎನ್ನುವುದು ರಾಜಕೀಯ ನಾಯಕರ ಲೆಕ್ಕಾಚಾರ.

Exit mobile version