Site icon PowerTV

ಟಾಸ್ ಸೋತ ಭಾರತ : ಆಸಿಸ್ ತಂಡಕ್ಕೆ ಸ್ಟಾರ್ ಬ್ಯಾಟರ್ ಕಮ್ ಬ್ಯಾಕ್

ಬೆಂಗಳೂರು : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ್ಯಕ್ಕೆ ಚೆನ್ನೈ ಕ್ರೀಡಾಂಗಣ ಸಜ್ಜಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿದ್ದರೆ, ಎರಡನೇ ಪಂದ್ಯದಲ್ಲಿ ಆಸೀಸ್ ಭಾರತವನ್ನು ಮಣಿಸಿತ್ತು. ಹೀಗಾಗಿ, ಇದು ಸರಣಿ ನಿರ್ಣಾಯಕ ಪಂದ್ಯವಾಗಿದೆ. ಭಾರತ 2ನೇ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆಸ್ಟ್ರೇಲಿಯಾ ಎರಡು ಬದಲಾವಣೆ ಮಾಡಿಕೊಂಡಿದ್ದು, ವಾರ್ನರ್ ಮತ್ತು ಆಗ‌ರ್ ಅವರನ್ನು ಕಣಕ್ಕಿಳಿಸಿದೆ.

2019ರ ಬಳಿಕ ಮೊದಲ ಪಂದ್ಯ

ಇನ್ನೂ ಚೆನ್ನೈನ ಚೆಪಾಕ್‌ ಕ್ರೀಡಾಂಗಣ ದೊಡ್ಡ ಮೊತ್ತಕ್ಕೆ ಹೆಸರುವಾಸಿಯಲ್ಲ. ಅಲ್ಲದೇ ಇಲ್ಲಿ 2019ರ ಬಳಿಕ ಮೊದಲ ಬಾರಿಗೆ ಏಕದಿನ ಪಂದ್ಯ ನಡೆಯಲಿದೆ. ಈ ಅಂಶಗಳು ಪಂದ್ಯವನ್ನು ಮತ್ತಷ್ಟು ರೋಚಕಗೊಳಿಸಲಿದೆ. ಜೊತೆಗೆ ಈ ಪಂದ್ಯದ ಫಲಿತಾಂಶ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ನಿರ್ಧರಿಸಲಿದೆ.

ಇದನ್ನೂ ಓದಿ : ಬ್ಯಾಟ್ ನಲ್ಲಿ ಧೋನಿ ಹೆಸರು, ಅದ್ಭುತ ಪ್ರದರ್ಶನ

ಭಾರತದ ಪ್ಲೇಯಿಂಗ್ XI

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿ.ಕೀ) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಯಾದವ್

Exit mobile version