Site icon PowerTV

ಯುಗಾದಿ ದಿನವೇ ಬಿಜೆಪಿಗೆ ಬಿಗ್ ಶಾಕ್ : ಕಾಂಗ್ರೆಸ್ ಸೇರಿದ ಹಿರಿಯ ನಾಯಕ

ಬೆಂಗಳೂರು : ಯುಗಾದಿ ಹಬ್ಬದ ದಿನವೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಹಿರಿಯ ನಾಯಕ ಬಿಜೆಪಿ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಹೌದು, ಬಿಜೆಪಿಗೆ ವಿದಾಯ ಹೇಳಿದ್ದ ಮಾಜಿ ಪರಿಷತ್ ಸದಸ್ಯ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಇಂದು ಕಾಂಗ್ರೆಸ್​ ಪಕ್ಷ ಕೂಡಿಕೊಂಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಬಾಬುರಾವ್ ಚಿಂಚನಸೂರ್​, ನಾನು ಅವಕಾಶವಾದಿ ರಾಜಕಾರಣಿ ಅಲ್ಲ ಎಂದು ಹೇಳಿದ್ದಾರೆ.

​ಇಂದಿಗೆ ಬಿಜೆಪಿ ಮುಗಿದ ಅಧ್ಯಾಯ. 2023ರಲ್ಲಿ ಚಿಂಚನಸೂರ್ ಸಾಮರ್ಥ್ಯ ಏನು ಅಂತಾ ಗೊತ್ತಾಗುತ್ತದೆ. ನಾನು ಡಿ.ಕೆ.ಶಿವಕುಮಾರ್ ಬಗ್ಗೆ ಎಲ್ಲೂ ಚಕಾರ ಎತ್ತಿಲ್ಲ. ನಾನು ಡಿ.ಕೆ.ಶಿವಕುಮಾರ್ ಋಣ ತೀರಿಸಬೇಕಿದೆ. ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್​​ಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.

ತಂದೆ ಮಗನ ಜಗಳ

ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಭಿನ್ನಾಭಿಪ್ರಾಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ಮತ್ತು ಖರ್ಗೆ ನಡುವೆ ತಂದೆ ಮಗನ ಜಗಳ. ತಂದೆ ಮಕ್ಕಳ ಭಿನ್ನಾಭಿಪ್ರಾಯ ಮುಗಿದ ಅಧ್ಯಾಯ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಹೇಳಿದ್ದಾರೆ.

ರಾಜಕೀಯ ಜೀವನ ಚೆನ್ನಾಗಿರಲಿ ಎಂದ ಡಿಕೆಶಿ

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆಯಿಟ್ಟು ಮಾಜಿ ಸಚಿವರು ಹಾಗೂ ವಿಧಾನಪರಿಷತ್‌ ಮಾಜಿ ಸದಸ್ಯ ಬಾಬುರಾವ್‌ ಚಿಂಚನಸೂರ್‌ ಅವರು ಇಂದು ಅಧಿಕೃತವಾಗಿ ನನ್ನ ನಿವಾಸದಲ್ಲಿ ಪಕ್ಷ ಸೇರ್ಪಡೆಯಾದರು. ಚಿಂಚನಸೂರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದ್ದೇನೆ ಎಂದಿದ್ದಾರೆ.

Exit mobile version