Site icon PowerTV

ಸುರ್ಜೇವಾಲಾ ಮೊದಲು ಇತಿಹಾಸ ಓದಲಿ : ಸಿಎಂ ಬೊಮ್ಮಾಯಿ

ಬೆಂಗಳೂರು : ಸಿಎಂ ರಾಜೀನಾಮೆಗೆ ಆಗ್ರಹಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ. ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಸಲಹೆ ನೀಡಿದ್ದಾರೆ.

ಮೀಸಲಾತಿ ಬಗ್ಗೆ ಕಾಂಗ್ರೆಸ್ ಗೆ ಮಾತನಾಡುವ ನೈತಿಕ ಹಾಗೂ ರಾಜಕೀಯ ಅಧಿಕಾರವಿಲ್ಲ. ಪದೇ ಪದೆ ಸಿಎಂ ರಾಜೀನಾಮೆಗೆ ಆಗ್ರಹಿಸುವುದು ಅವರ ಅಭ್ಯಾಸ. ಇದನ್ನು ಬಿಟ್ಟು ಅವರಿಗೆ ಬೇರೆ ಕೆಲಸವಿಲ್ಲ  ಎಂದು ಕುಟುಕದ್ದಾರೆ.

ಶೆಡ್ಯೂಲ್ 9ಕ್ಕೆ ಸೇರಿಸುವ ಭರವಸೆ

ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ.

ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Exit mobile version