Site icon PowerTV

ಬಿಜೆಪಿ-ಕಾಂಗ್ರೆಸ್ ನಿಂದ ಆಫರ್ ಬಂದಿತ್ತು : ಜೆಡಿಎಸ್ ಶಾಸಕನ ಹೊಸ ಬಾಂಬ್

ಬೆಂಗಳೂರು : ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಹಬ್ಬಿರುವ ವದಂತಿಗಳಿಗೆ ಜೆಡಿಎಸ್ ಶಾಸಕ ದೇವಾನಂದ ಚೌಹಾನ್ ಸ್ಪಷ್ಟನೆ ಕೊಟ್ಟಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ಈ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಆಫರ್ ಬಂದಿದ್ದವು. ಆದರೆ, ನಾನು ಜೆಡಿಎಸ್ ಪಕ್ಷದಲ್ಲೇ ಮುಂದುವರಿಯಲು ನಿರ್ಧಿರಿಸಿದ್ದೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೆ ಇಲ್ಲ. ಈಗ ಆಫರ್‌ಗಳದ್ದು ಮುಗಿದ ಅಧ್ಯಾಯ. ಕಾಂಗ್ರೆಸ್ ಗೆ ಹೋಗುವ ಯಾವುದೇ ಮೂಮೆಂಟ್ ಸದ್ಯಕ್ಕಿಲ್ಲ. ಹಿಂದೆ ಒಂದು ಹಂತ ಇತ್ತು. ಈಗ ಮುಗಿದು ಹೋಗಿದೆ. ಎಂದು ತಿಳಿಸಿದ್ದಾರೆ.

ಆಫರ್ ಗಳ ಬಗ್ಗೆ ಮಾತನಾಡೋದು ಬೇಡ

ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಚೌಹಾಣ್, ಈಗ ಬೇರೆ ಪಕ್ಷಕ್ಕೆ ಹೋಗುವ ವಿಚಾರಗಳಿಲ್ಲ. ಹಿಂದೆ ಬಂದ ಆಹ್ವಾನಗಳ ಬಗ್ಗೆ ಈಗ ಮಾತನಾಡುವುದು ಬೇಡ. ಅದೊಂದು ಮುಗಿದ ಅಧ್ಯಾಯ ಎಂದು ಜಾರಿಕೊಂಡಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಅನುಕಂಪದ ಅಲೆ ಇದೆ. ಶಿವಾನಂದ ಪಾಟೀಲ್ ಸೋಮಜಾಳ ನಿಧನ ಬಳಿಕ ಅವರ ಪತ್ನಿ ಪ್ರಚಾರದಲ್ಲಿ ತೊಡಗಿದ್ದಾರೆ. ವಿಜಯಪುರ ಜಿಲ್ಲೆಯ ಮೂರದಿಂದ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version