Site icon PowerTV

ಕಾಂಗ್ರೆಸ್ ಮೊದಲ ಪಟ್ಟಿ : ಇವರೇ ತುಮಕೂರು ಕಾಂಗ್ರೆಸ್ ಅಭ್ಯರ್ಥಿಗಳು

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್​ಗಾಗಿ ಭಾರೀ ಲಾಭಿ ನಡೆದಿತ್ತು. ಇದೀಗ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ತನ್ನ ಪಾರುಪತ್ಯ ಉಳಿಸಿಕೊಂಡಿರುವ ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಯಾರಿಗೆ ಮನೆ ಹಾಕುತ್ತದೆ ಅನ್ನೋದು ಕುತೂಹಲಕ್ಕೆ ತೆರೆಬಿದ್ದಿದೆ. ಮೊದಲ ಪಟ್ಟಿಯಲ್ಲಿ ತುಮಕೂರು ನಗರ, ಗುಬ್ಬಿ, ತುಮಕೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಕಲ್ಪತರು ನಾಡು ತುಮಕೂರು ಜಿಲ್ಲೆಯ ಎಲ್ಲಾ 11 ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಂಡಿದ್ದು, ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರು ಹಾಗೂ ಹಿರಿಯ ನಾಯಕರಿಗೆ ಮಣೆ ಹಾಕಲಾಗಿದೆ.

ಎಂಟು ಕ್ಷೇತ್ರಗಳ ಅಭ್ಯರ್ಥಿಗಳು

Exit mobile version