Site icon PowerTV

ವರುಣಾದಿಂದ ಸಿದ್ದರಾಮಯ್ಯ ಕಣಕ್ಕೆ ; 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಈ ಬಾರಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.

ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಬಹು ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ ಕ್ಷೇತ್ರ ಗೊಂದಲಕ್ಕೆ ಬ್ರೇಕ್ ಬಿದ್ದಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ.

ಡಿ.ಕೆ ಶಿವಕುಮಾರ್​ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕ್ರಪ್ಪನವರು  ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್​ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.

Exit mobile version