Site icon PowerTV

ಕರುನಾಡಲ್ಲಿ ಪ್ರಧಾನಿ ಮೋದಿ ‘ಕಬ್ಜ’ : ಏಳನೇ ಬಾರಿ ರಾಜ್ಯಕ್ಕೆ ಮೋದಿ

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಏಳನೇ ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಇತರ ಗಣ್ಯರು ಸಾಥ್ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಹಲವು ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ, ವೈಟ್​​ಫೀಲ್ಡ್- ಕೆ.ಆರ್.ಪುರ ಮಾರ್ಗದ ನೂತನ ಮೆಟ್ರೋ ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ.

ವೈಟ್‌ಫೀಲ್ಡ್‌ ಟು ಕೆ.ಆರ್. ಪುರ ವಿಶೇಷತೆಗಳು

Exit mobile version