Site icon PowerTV

ಸಿದ್ದು ರೂಟ್ ಕ್ಲಿಯರ್, ಯತೀಂದ್ರ ಈಗ ಅತಂತ್ರ

ಬೆಂಗಳೂರು : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಹೌದು, ರಾಜ್ಯ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಈ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು.

ಆದರೆ, ಹೈಕಮಾಂಡ್‌ ನಾಯಕರ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಗೊಂದಲಕ್ಕೀಡಾಗಿತ್ತು. ಆದರೆ, ಇದೀಗ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಿದ್ದು, ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಅದೇ ರೀತಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದ ಟಿಕೆಟ್‌ಯಿಲ್ಲದಂತಾಗಿದೆ. ಯತೀಂದ್ರಗೆ ಹೈಕಮಾಂಡ್ ಯಾವ ಕ್ಷೇತ್ರದ ಟಿಕೆಟ್ ನೀಡಲಿದೆ ಎಂದು ಕಾದುನೋಡಬೇಕಿದೆ.

Exit mobile version