Site icon PowerTV

ಬೊಮ್ಮಾಯಿಗೆ ಶಾಕ್ : ಸಿ.ಟಿ. ರವಿ ಮುಂದಿನ ಸಿಎಂ?

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಸ್​ ಲೀಡರ್​ಗಳನ್ನು ಮುಂದಿನ ಮುಖ್ಯಮಂತ್ರಿ ಎಂದು ಅಭಿಮಾನಿಗಳು ಘೋಷಣೆ ಮಾಡುತ್ತಿದ್ದಾರೆ.

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳು ಹಲವರಿದ್ದರೂ ಸಿದ್ದರಾಮಯ್ಯ  ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುಂದಿನ ಸಿಎಂ ನೀವೇ ಎಂದು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಮುಂದಿನ ಸಿಎಂ ನಾನೇ ಎಂದು ಸ್ವತಃ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು.

ಈ ನಡುವೆ ಕರ್ನಾಟಕ ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಎಂದು ಅಭಿಮಾನಿಗಳು ಘೋಷಣೆ ಕೂಗಲು ಆರಂಭಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕರ್ನಾಟಕದ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಚಿಕ್ಕಮಗಳೂರು ನಗರದಿಂದ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡಿದ್ದಾರೆ.

ಮಲ್ಲೇನಹಳ್ಳಿ ಸಮೀಪವಿರುವ ಇತಿಹಾಸ ಪ್ರಸಿದ್ಧ ಸುಬ್ರಹ್ಮಣ್ಯ ಸ್ವಾಮಿಗೆ ಬೆಳ್ಳಿಯ ಬಾಣ ಅರ್ಪಿಸಿದ ಅಭಿಮಾನಿಗಳು ಸಿ.ಟಿ ರವಿ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬೇಡಿಕೊಂಡಿದ್ದಾರೆ. ಸುಮಾರು 300ಕ್ಕೂ ಅಧಿಕ ಅಭಿಮಾನಿಗಳು ಕೈಗೊಂಡ ಈ ಪಾದಯಾತ್ರೆಯಲ್ಲಿ ಮುಂದಿನ ಸಿಎಂ ಸಿ.ಟಿ ರವಿ ಎಂದು ಘೋಷಣೆ ಕೂಗಿದ್ದಾರೆ.

Exit mobile version