Site icon PowerTV

ಪಂಚರತ್ನ ಸಮಾರೋಪಕ್ಕೆ ಕೌಂಟ್ ಡೌನ್ : ಸಮಾರಂಭದ ವಿಶೇಷತೆಗಳೇನು? ಹೀಗಿದೆ ಊಟದ ಮೆನು

ಬೆಂಗಳೂರು : ಜೆಡಿಎಸ್ ಪಂಚರತ್ನ ಯಾತ್ರೆ ಅದ್ಧೂರಿ ಸಮಾರೋಪ ಸಮಾರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಮೈಸೂರಿನ ಚಾಮುಂಡೇಶ್ವರಿ ತಪ್ಪಲಿನಲ್ಲಿ ಸಮಾರಂಭ ಆಯೋಜನೆ ಮಾಡಿದ್ದು, ಸಂಜೆ 4 ಗಂಟೆಗೆ ಸಮಾರಂಭ ಆರಂಭವಾಗಲಿದೆ.

ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಮಾರೋಪ ಸಮಾರಂಭ ನಡೆಯುತ್ತಿದೆ. ಸಮಾವೇಶದಲ್ಲಿ ಸುಮಾರು 10 ಲಕ್ಷ ಜನ ಭಾಗಿಯಾಗುವ ಸಾಧ್ಯತೆಯಿದೆ. ಎಲ್ಲರಿಗೂ ಭರ್ಜರಿ ಭೋಜನ, ಬೃಹತ್ ವೇದಿಕೆ, ಸೂಕ್ತ ಆಸನದ ವ್ಯವಸ್ಥೆ ಮಾಡಲಾಗಿದೆ.

ಎಚ್ ಡಿಡಿ ಸೇರಿ ಗಣ್ಯರ ಭಾಗಿ

ಸಮಾರೋಪ ಸಮಾರಂಭದ ಕೇಂದ್ರ ಬಿಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ. ಅನಾರೋಗ್ಯದ ನಡುವೆ ದೇವೇಗೌಡ್ರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಆ ಮೂಲಕ ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವ ಎಚ್.ಡಿ ರೇವಣ್ಣ, ಅನಿತಾ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಗಣ್ಯರು ವೇದಿಕೆ ಹಂಚಿಕೊಳ್ಳಲಿದ್ದಾರೆ.

ಹೀಗಿದೆ ಊಟದ ಮೆನು

ಪಂಚರತ್ನ ಯಾತ್ರೆ ನಡೆದು ಬಂದದ್ದು ಹೀಗೆ

Exit mobile version