Site icon PowerTV

ಸಿಎಂ ಬೊಮ್ಮಾಯಿ ಸರ್ಕಾರಿ ಪ್ರೋಗ್ರಾಂ ಕ್ಯಾನ್ಸಲ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಪ್ರಕಟವಾಗಿದೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.

ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.

ಚುನಾವಣೆ ಘೋಷಣೆ ಮೂಲಕ ಇಂದಿನಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಸುದ್ದಿಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ, ನಾಮಪತ್ರ ಸಲ್ಲಿಕೆ ಯಾವಾಗ? ನಾಮಪತ್ರ ಹಿಂಪಡೆಯುವುದು, ನಾಮಪತ್ರ ಪರಿಶೀಲನೆ, ಮತದಾನ ಹಾಗೂ ಫಲಿತಾಂಶ ದಿನಾಂಕವನ್ನು ಪ್ರಕಟಿಸಲಿದೆ.

Exit mobile version