Site icon PowerTV

ಸಾರಿಗೆ ನೌಕರರಿಗೆ ಗುಡ್ ನ್ಯೂಸ್! : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ಕರ್ನಾಟಕ ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿ ಬರುವಂತೆ ಇಂದು ಆದೇಶಿಸಿದೆ. ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ, ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು. ರಾಜ್ಯ ಸರ್ಕಾರ ಮಾರ್ಚ್​ 28ರಂದು  ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು. ಇದೀಗ ಅದರಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂದು ಬೇಡಿಕೆ

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು (ಮಾ.21ರಿಂದ) ಮುಷ್ಕರಕ್ಕೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ಸರ್ಕಾರ ವೇತನ ಹೆಚ್ಚಳ ಮಾಡಿತ್ತು. ಆದರೆ, ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ.

Exit mobile version