Site icon PowerTV

ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ : ಹೇಗಿದೆ ಸಿದ್ಧತೆ

ಬೆಂಗಳೂರು : 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ(ಮಾರ್ಚ್‌ 31ರಿಂದ) ರಾಜ್ಯದ 3,305 ಕೇಂದ್ರಗಳಲ್ಲಿ ನಡೆಯಲಿದೆ.

ಹೌದು, ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ ಬರೋಬ್ಬರಿ 200 ಮೀಟರ್‌ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಮಾರ್ಚ್‌ 31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ (100 ಅಂಕಗಳು), ಏಪ್ರಿಲ್ 3ರಂದು ಗಣಿತ (80 ಅಂಕಗಳು), 6ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 8ರಂದು ಎಂಜಿ ನಿಯರಿಂಗ್, ಅರ್ಥಶಾಸ್ತ್ರ ಸೇರಿ ದಂತೆ ಇತರೆ ವಿಷಯಗಳ (ಜೆಟಿಎಸ್‌ ಶಾಲೆಯ ವಿದ್ಯಾರ್ಥಿಗಳಿಗೆ) ಪರೀಕ್ಷೆಗಳು ನಡೆಯಲಿವೆ.

ಉಚಿತ ಪ್ರಯಾಣಕ್ಕೆ ಅವಕಾಶ

ಪರೀಕ್ಷೆ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 10ನೇ ತರಗತಿ ಪರೀಕ್ಷೆ ಬರೆಯಲು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಹೀಗಿದೆ ಪರೀಕ್ಷಾ ವೇಳಾಪಟ್ಟಿ

Exit mobile version