Site icon PowerTV

Breaking News: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ?

ಬೆಂಗಳೂರು : ಪರೀಕ್ಷೆ ಅಕ್ರಮಗಳ ಸಾಲಿಗೆ ಸಾಕ್ಷಿ ಎಂಬಂತೆ ಮತ್ತೊಂದು ಘಟನೆ ನಡೆದಿದೆ. ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. 

ಹೌದು, ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ(SSLC)ಪರೀಕ್ಷೆಗಳು ಆರಂಭವಾಗಿದೆ. ಆದರೆ, ಕಲಬುರಗಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವದಂತಿ ಹಬ್ಬಿದೆ. ಇಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ ಭಾಷೆಗಳ ಪರೀಕ್ಷೆ ನಡೆಯುತ್ತಿದೆ.

ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ವಾಟ್ಸಪ್‌ನಲ್ಲಿ ಹರಿಬಿಟ್ಟಿದ್ದಾರೆ ಎಂಬ ಶಂಕೆಯಿದೆ. ವೈರಲ್ಲಾಗಿರುವುದು ಅಸಲಿಯೋ ಅಥವಾ ನಕಲಿಯೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ರಾಜ್ಯದ 3,305 ಕೇಂದ್ರಗಳಲ್ಲಿ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ ಬರೋಬ್ಬರಿ 200 ಮೀಟರ್‌ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಏ.15ರವರೆಗೆ ನಿಷೇಧಾಜ್ಞೆ

ಪರೀಕ್ಷಾ ಕೇಂದ್ರದ ಪ್ರದೇಶದಲ್ಲಿ ಜೆರಾಕ್ಸ್‌ ಮತ್ತು ಸೈಬರ್‌ ಸೆಂಟರ್‌ಗಳನ್ನು ತೆರೆಯುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಮಾ.31 ರಿಂದ ಏ.15ರವರೆಗೆ ನಡೆಯುವ ಪರೀಕ್ಷೆಯ ದಿನಗಳ ವೇಳೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಸೂತ್ರವಾಗಿ ಬರೆಯಲು ಅನುಕೂಲ ಆಗುವಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆಯೂ ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿರುವುದು ವಿಪರ್ಯಾಸವೇ ಸರಿ.

Exit mobile version