Site icon PowerTV

ಇನ್ನೊಂದು ತಿಂಗಳಷ್ಟೇ ನಿಮ್ಮ ಸಮಯ : HDK ಎಚ್ಚರಿಕೆ ನೀಡಿದ್ದು ಯಾರಿಗೆ?

ಬೆಂಗಳೂರು : ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಮಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ಧಮ್ಕಿ, ಕಿರುಕುಳ ಕೊಡುವುದು ಆಗ್ತಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಬಂದಾಗಿನಿಂದ ಇದು ಜಾಸ್ತಿಯಾಗಿದೆ. ಬೇರೆ ಪಕ್ಷದಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬರುವವರನ್ನು ಕೆಲ ಕಡೆ ಪೋಲಿಸರ ಮಧ್ಯಸ್ಥಿಕೆಯಲ್ಲಿ ಹೆದರಿಸಿ ಅವರನ್ನು ಪುನಾ ಅದೇ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇನ್ನೊಂದು ತಿಂಗಳಷ್ಟೇ ನಿಮ್ಮ ಸಮಯ

ನಾನು ಪೋಲಿಸರಿಗೆ ಎಚ್ಚರಿಕೆ ಕೊಡುತ್ತೇನೆ. ಇನ್ನೊಂದು ತಿಂಗಳು ಅಷ್ಟೇ ನಿಮ್ಮ ಸಮಯ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಜೂನ್ ತಿಂಗಳ ಬಳಿಕ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಜನತೆಯ ಹಣದಿಂದ ನೀವು ಕೆಲಸ ಮಾಡ್ತಿದ್ದೀರಿ ಅನ್ನೋದನ್ನು ಅಧಿಕಾರಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು. ನಾನೂ ಎರಡು ಬಾರಿ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಎಂದೂ ಇಂಥ ದ್ವೇಷದ ರಾಜಕೀಯಕ್ಕೆ ನಾನು ಪ್ರೋತ್ಸಾಹ ಕೊಟ್ಟಿಲ್ಲ. ಅಧಿಕಾರಿಗಳು ತಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Exit mobile version