Site icon PowerTV

ಬಿಜೆಪಿ ಪ್ರಣಾಳಿಕೆ ‘ಸುಳ್ಳಿನ ಕಂತೆ’ ಅಲ್ಲ : ಸಚಿವ ಸುಧಾಕರ್

ಬೆಂಗಳೂರು : ಬಿಜೆಪಿಯ ಪ್ರಣಾಳಿಕೆ ಸುಳ್ಳಿನ ಕಂತೆ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಬಿಎಂಪಿ ಹೋಟೆಲ್ ಅಸೋಸಿಯೇಷನ್ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಬಿಜೆಪಿಯ ಪ್ರಣಾಳಿಕೆ ಸುಳ್ಳಿನ ಕಂತೆ ಅಲ್ಲ. ಹೀಗಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಭೇಟಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಸೇವಾ ವಲಯದಲ್ಲಿ ಸೃಷ್ಟಿಯಾಗುವಷ್ಟು ಉದ್ಯೋಗ ಬೇರೆಲ್ಲೂ ಆಗುವುದಿಲ್ಲ. ಹೀಗಾಗಿ, ಹೊಟೇಲ್‌ ಉದ್ಯಮಿಗಳ ಜೊತೆ ಮೊದಲ ಸಂವಾದ ನಡೆಯುತ್ತಿದೆ. ಮುಂದಿನ ದಿನ ಹೊಟೇಲ್‌ ಕೆಲಸಗಾರರ ಬಳಿಯೂ ಸಲಹೆ ಪಡೆಯಲಾಗುವುದು. ಎಲ್ಲಾ ತರಹದ ಶಿಕ್ಷಣ ಇರುವವರಿಗೆ ಉದ್ಯೋಗ ನೀಡುವ ಉದ್ಯಮ ಇದಾಗಿದೆ ಎಂದಿದ್ದಾರೆ.

ಸುಳ್ಳು, ಪೊಳ್ಳು ಭರವಸೆ ಅಲ್ಲ

ಬಿಜೆಪಿಯ ಪ್ರಣಾಳಿಕೆ ಸಮಾಜದ ಪ್ರತಿ ವಲಯದ ಜನರ ಆಶೋತ್ತರಗಳು, ಅಭಿಲಾಷೆಗಳಂತೆ ಸಿದ್ಧವಾಗಲಿದೆ. ಕೇವಲ ಮತ ಗಳಿಕೆಯ ಉದ್ದೇಶಕ್ಕಾಗಿ ಸುಳ್ಳು, ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

Exit mobile version