Site icon PowerTV

‘ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಸರೆ’ : ರಾಹುಲ್ ಗಾಂಧಿ

ಬೆಂಗಳೂರು : ಮೋದಿ ಉಪನಾಮ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಸರೆ. ಪ್ರಜಾಪ್ರಭುತ್ವದ ರಕ್ಷಣೆಗೆ ‘ಮಿತ್ರಕಾಲ’ದ ವಿರುದ್ಧದ ಹೋರಾಟ ಇದಾಗಿದೆ ಎಂದು ಹೇಳಿದ್ದಾರೆ.

ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಜಾಮೀನು ನೀಡಿರುವ ಸೂರತ್ ನ್ಯಾಯಾಲಯ, ಮುಂದಿನ ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿದೆ. ಇಂದು ಸೂರತ್‌ಗೆ ಆಗಮಿಸಿದ ರಾಹುಲ್, ತಮಗೆ ಜೈಲು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯ ಮಾರ್ಚ್ 23ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನಲ್ಲಿರಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.

2019ರಲ್ಲಿ ಕೋಲಾರದಲ್ಲಿ ತಮ್ಮ ಭಾಷಣದ ವೇಳೆ ರಾಹುಲ್ ಗಾಂಧಿ, ‘ಮೋದಿ ಉಪನಾಮ ಹೊದಿರುವವರೆಲ್ಲೂ ಕಳ್ಳರೇ’ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಬಿಜೆಪಿ ನಾಯಕರೊಬ್ಬರು ಸೂರತ್ ನಲ್ಲಿ ಪ್ರಕರಣ (ದುರು) ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾಗಿದೆ.

ಸೂರತ್‌ಗೆ ಬಂದು ರಾಹುಲ್‌ ಗಾಂಧಿ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಮುಖ್ಯಮಂತ್ರಿಗಳಾದ ಅಶೋಕ್‌ ಗ್ಲೆಹೋಟ್‌, ಭೂಪೇಶ್‌ ಭಾಗೇಲ್‌ ಮತ್ತು ಸುಖ್ವಿಂದರ್‌ ಸಿಂಗ್‌ ಸುಖು ಜೊತೆಯಲ್ಲಿದ್ದರು.

Exit mobile version