Sunday, August 24, 2025
Google search engine
HomeUncategorizedದರ್ಶನ್ ಧ್ರುವನಾರಾಯಣಗೆ ಜೆಡಿಎಸ್ ಬೆಂಬಲ : ಅಭ್ಯರ್ಥಿ ಕಣಕ್ಕಿಳಿಸದಿರಲು ನಿರ್ಧಾರ

ದರ್ಶನ್ ಧ್ರುವನಾರಾಯಣಗೆ ಜೆಡಿಎಸ್ ಬೆಂಬಲ : ಅಭ್ಯರ್ಥಿ ಕಣಕ್ಕಿಳಿಸದಿರಲು ನಿರ್ಧಾರ

ಬೆಂಗಳೂರು : ತಂದೆ ಅಗಲಿಕೆ ಬಳಿಕ ತಾಯಿಯನ್ನು ಕಳೆದುಕೊಂಡಿರುವ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಜೆಡಿಎಸ್ ನಾಯಕರು ಬೆಂಬಲ ಸೂಚಿಸಲು ಮುಂದಾಗಿದ್ದಾರೆ.

ಹೌದು, ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರು ಕಳೆದ ತಿಂಗಳು ತಂದೆ ಆರ್​.ಧ್ರುವನಾರಾಯಣ ಅವರನ್ನು ಕಳೆದುಕೊಂಡಿದ್ದರು. ಈ ನೋವಿನಲ್ಲಿ ಚುನಾವಣೆ ಪ್ರಚಾರಕ್ಕಿಳಿದಿದ್ದರು.

ಆದ್ರೆ, ಇದೀಗ ದರ್ಶನ್ ತಾಯಿ ವೀಣಾರನ್ನು ಸಹ ಕಳೆದುಕೊಂಡು ಅನಾಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣ ವಿರುದ್ಧ ಜೆಡಿಎಸ್​ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವರಿಗೆ ಬೆಂಬಲಿಸಲು ದಳಪತಿಗಳು ಮುಂದಾಗಿದ್ದಾರೆ. ಈ ಬಗ್ಗೆ ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಹಾಗೂ ಶಾಸಕ ಸಾ.ರಾ.ಮಹೇಶ್​ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಧ್ರುವನಾರಾಯಣರ ಇಬ್ಬರು ಮಕ್ಕಳು ಲವ ಕುಶ ರೀತಿ ಕಾಣುತ್ತಿದ್ದಾರೆ. ತಂದೆ ಕಳೆದುಕೊಂಡ ನೋವು ಇರುವಾಗಲೇ ತಾಯಿ ಕಳೆದುಕೊಂಡಿದ್ದಾರೆ. ಇಂತಹ ದುಃಖದಲ್ಲಿರುವವರ ಎದುರು ಸ್ಪರ್ಧಿಸಲು ನಮಗೆ ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿ ಸ್ಪರ್ಧೆ ಮಾಡಬೇಕಾ ಬೇಡ್ವಾ ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಬಗ್ಗೆ ಸಾರಾ ಮಹೇಶ್​ ಕೂಡ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಸಿದ್ದರಾಮಯ್ಯ ಸಂತಾಪ

ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಆತ್ಮೀಯರು, ಮಾಜಿ ಸಂಸದರು ಆಗಿದ್ದ ದಿವಂಗತ ಧ್ರುವನಾರಾಯಣ್ ಅವರ ಪತ್ನಿ ವೀಣಾ ಧ್ರುವನಾರಾಯಣ್ ಅವರ ಸಾವು ಆಘಾತಕಾರಿಯಾದುದು. ಅಗಲಿದ ಜೀವಕ್ಕೆ ನಮನಗಳು. ವೀಣಾ ಅವರ ಅಗಲಿಕೆಯ ದು:ಖವನ್ನು ಸಹಿಸಿಕೊಳ್ಳುವ ಶಕ್ತಿ ಮಗ ದರ್ಶನ್ ಸೇರಿದಂತೆ ಆ ಕುಟುಂಬ ಪಡೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದ ಟ್ವೀಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments