Site icon PowerTV

ನೂರು ಕೋಟಿ ಕ್ಲಬ್ ಸೇರಿಗೆ ನಾನಿ ‘ದಸರಾ’ : ನಿರ್ದೇಶಕರಿಗೆ ದುಬಾರಿ ಕಾರು ಗಿಫ್ಟ್

ಬೆಂಗಳೂರು : ನ್ಯಾಚುರಲ್ ಸ್ಟಾರ್ ನಾನೀಸ್ ದಸರಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಮಾಲ್ ಮಾಡುತ್ತಿದೆ. ಕೇವಲ ಆರು ದಿನದಲ್ಲಿಯೇ ನೂರು ಕೋಟಿ ಬಾಚಿಕೊಂಡಿದೆ.

ಇದೇ ಶ್ರೀರಾಮ ನವಮಿ ಪ್ರಯುಕ್ತ ವಿಶ್ವಾದ್ಯಂತ ತೆರೆಕಂಡ ದಸರಾ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಶತ ಕೋಟಿ ಕ್ಲಬ್ ಸೇರಿದ ನಾನಿ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ದಸರಾ ಸಿನಿಮಾ ಪಾತ್ರವಾಗಿದೆ.

ಯುವ ಪ್ರತಿಭೆ ಶ್ರೀಕಾಂತ್ ಒಡೆಲಾ ನಾನಿಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ದಸರಾಗೆ ಆಕ್ಷನ್ ಕಟ್ ಹೇಳಿದ್ದರು. ಕಲ್ಲಿದ್ದಲು ಗಣಿಯ ಸುತ್ತ ನಡೆಯುವ ಗ್ರಾಮೀಣ ಸೊಗಡಿನ ಕತೆಯಲ್ಲಿ ನಾನಿ ಜೊತೆಗೆ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಿದ್ದರು.

ಎಸ್.ಎಲ್.ವಿ ಕ್ರಿಯೇಷನ್ ಅಡಿ ಸುಧಾಕರ್ ಚೆರುಕೂರಿ ಅದ್ಧೂರಿಯಾಗಿ ದಸರಾ ಸಿನಿಮಾ ನಿರ್ಮಿಸಿದ್ದರು. ಚಿತ್ರ ಅಭೂತಪೂರ್ವ ಯಶಸ್ಸು ಕಂಡಿರುವ ಖುಷಿಯಲ್ಲಿರುವ ನಿರ್ಮಾಪಕರು‌ ಹೈದ್ರಾಬಾದ್ ಕರಿಮಾನಗರದಲ್ಲಿ ಸಕ್ಸಸ್ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಶ್ರೀಕಾಂತ್ ಒಡೆಲಾಗೆ ದುಬಾರಿ ಮೊತ್ತದ ಬಿಎಂಡಬ್ಲ್ಯೂ ಕಾರು ಗಿಫ್ಟ್ ನೀಡಿದ್ದರು.

ಇನ್ನೂ, ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣ್ತಿರುವ ದಸರಾ ಚಿತ್ರಗೆ ನಟ ಮಹೇಶ್ ಬಾಬು, ನಿರ್ದೇಶಕ ಎಸ್.ಎಸ್ ರಾಜಮೌಳಿ, ಪ್ರಭಾಸ್ ಹಾಗೂ ಇನ್ನಿತರ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version