Site icon PowerTV

ಚುನಾವಣೆಗೆ ಎಂಟಿಬಿ ನಾಗರಾಜ್ ಗುಡ್ ಬೈ : ಪುತ್ರನಿಗೆ ಟಿಕೆಟ್ ನೀಡುವಂತೆ ಡಿಮ್ಯಾಂಡ್

ಬೆಂಗಳೂರು : ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ರಾಜ್ಯ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ತನ್ನ ಮಗನಿಗೆ ಈ ಬಾರಿ ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ.

ಇನ್ನೂ ಇಂದು ಎಂಟಿಬಿ ನಾಗರಾಜ್ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಬಳಕ ಸುದ್ದಿಗಾರರೊಂದಿಗೆ ಮಾತನಾಡಿರುವ ಎಂಟಿಬಿ ನಾಗರಾಜ್, ನನ್ನ ಮಗನಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ಮಾಡಿದ್ದೇನೆ. ಈಗ ಯಡಿಯೂರಪ್ಪ ಭೇಟಿ ಮಾಡಿ ಮನವಿ ಮಾಡಿದ್ದೇನೆ‌ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿ ಪ್ರಣಾಳಿಕೆ ‘ಸುಳ್ಳಿನ ಕಂತೆ’ ಅಲ್ಲ : ಸಚಿವ ಸುಧಾಕರ್

ಮಗನನ್ನು ಗೆಲ್ಲಿಸಿಕೊಂಡು ಬರ್ತೀನಿ

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರಿಗೂ  ಈ ಕುರಿತು ಮನವಿ ಮಾಡಿದ್ದೇನೆ. ಹೊಸಕೋಟೆಯಿಂದ ನನ್ನ ಮಗನಿಗೆ ಟಿಕೆಟ್ ಕೊಡ್ತಾರೆ. ನಾನು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ಲ. ನಾನು ಎಲ್ಲೂ ಸ್ಪರ್ಧೆ ಮಾಡೋದಿಲ್ಲ. ನನ್ನ ಮಗನಿಗೆ ಟಿಕೆಟ್ ಕೊಡಿ ನಾನು ಗೆಲ್ಲಿಸಲಿದ್ದೇನೆ ಎಂದಿದ್ದೇನೆ ಅಂತಾ ಮಾಹಿತಿ ನೀಡಿದ್ದಾರೆ.

ಹೊಸಕೋಟೆಯಲ್ಲಿ ಈ ಬಾರಿ ನನ್ನ ಮಗ ಗೆಲ್ಲಲಿದ್ದಾನೆ. ಕುರುಬ ಸಮುದಾಯಕ್ಕೆ 8 ಟಿಕೆಟ್ ನೀಡಬೇಕು ಎಂದು ಕೇಳಿದ್ದೇನೆ. ಯಡಿಯೂರಪ್ಪ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಗೆಲ್ಲುವ ಕ್ಷೇತ್ರದಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Exit mobile version