Site icon PowerTV

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು : 9 ಶಿಕ್ಷಕರನ್ನು ಅಮಾನತು

ಬೆಂಗಳೂರು : ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದರೂ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡಿದ್ದಾರೆ.

ಶಿಕ್ಷಕರೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡಿರುವ ಘಟನೆ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಶಿವಾಜಿ ಶಾಲೆಯಲ್ಲಿ ನಡೆದಿದೆ. ಎಸ್ಸೆಸ್ಸೆಲ್ಸಿ ಇಂಗ್ಲಿಷ್ ವಿಷಯ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆದಿದ್ದು, 9 ಶಿಕ್ಷಕರನ್ನು ಅಮಾನತ್ತು ಮಾಡಲಾಗಿದೆ.

ಪರೀಕ್ಷಾ ಕೊಠಡಿಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಭೇಟಿ ಕೊಟ್ಟಾಗ ಸಾಮೂಹಿಕ ನಕಲು ಕಂಡು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಭಾಲ್ಕಿ ದಾಡಗಿ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಬಾಲಾಜಿ ಕಾಂಬ್ಳೆ, ಭಾಲ್ಕಿ ಮೇಹಕರ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಶೇಷಪ್ಪಾ, ಭಾಲ್ಕಿ ಲಾಧಾ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಸಂಪತ್, ಲಾಧಾ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಗೋವಿಂದ,  ಕಲವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಕುಪೇಂದ್ರ, ನಾವದಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಶಿವಾಜಿ, ಕಾಕನಾಳ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಮಾರುತಿ ರಾಥೋಡ್, ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಮಾಸಿಮಾಡ ಶಿವಕುಮಾರ್ ಬಿರಾದಾರ, ಸಾಯಗಾಂವ್ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಭೀಮ್ ರಾವ್ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ.

Exit mobile version