Site icon PowerTV

ಸುದೀಪ್ ನಮಗೆ ಬೆಂಬಲಿಸಿರುವುದರಿಂದ ‘ಕಾಂಗ್ರೆಸ್ ಗೆ ನಡುಕ’ ಹುಟ್ಟಿದೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಸುದೀಪ್ ಅವರು ನಮಗೆ (ಬಿಜೆಪಿ ಪಕ್ಷ) ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ ಗೆ ನಡುಕ ಹುಟ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ.

ನಟ ಸುದೀಪ್ ಬಿಜೆಪಿ ಬೆಂಬಲ‌ ನೀಡುವ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆ ತಂದು ಚುನಾವಣಾ ಪ್ರಚಾರ ಮಾಡಿದ್ದಾರೆ. ಅಂಬರೀಶ್ ಪ್ರಚಾರ ಮಾಡಲಿಲ್ಲವೇ, ಶಾಸಕರಾಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಬೆಂಬಲ‌ ನೀಡುವ ಮುಂಚೆ ಅದರಿಂದಾಗೊ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ ಗೆ ನಡುಕ ಹುಟ್ಟಿದೆ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ನಮ್ಮ ಶಕ್ತಿ ಮೇಲೆ ನಂಬಿಕೆ ಇದೆ

ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ನಮ್ಮ ಶಕ್ತಿ ಮೇಲೆ ನಮಗೆ ನಂಬಿಕೆ ಇದೆ. ಸಹಜವಾಗಿಯೇ ಅದರ ಲಾಭ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸುದೀಪ್ ಸಿನಿಮಾ’ಗಳನ್ನು ಬಿಜೆಪಿಯವ್ರು ಮಾತ್ರ ನೋಡ್ತಾರಾ? : ಪ್ರಿಯಾಂಕ್ ಖರ್ಗೆ

ಹಾಲಿ ಶಾಸಕರಿಗೆ ಟಿಕೆಟ್ ಮಿಸ್?

ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವು, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ನಾಳೆ ಸಂಜೆ ಐದು ಗಂಟೆಗೆ ಸಂಸದಿಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ  ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Exit mobile version