Site icon PowerTV

‘ನಂದಿನಿ ನಂ.1 ಬ್ರ್ಯಾಂಡ್’ ಆಗಲಿದೆ : ಸಿಎಂ ಬೊಮ್ಮಾಯಿ

ಬೆಂಗಳೂರು : ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆಮಾತನಾಡಿರುವ ಅವರು, ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ತಿಳಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ : ನಂದಿನಿ ಬ್ರ್ಯಾಂಡ್ ಉಳಿಸಲು ಟ್ವಿಟರ್​ನಲ್ಲಿ ಕನ್ನಡಿಗರಿಂದ ಸೇವ್‌ ನಂದಿನಿ ಅಭಿಯಾನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ನಾಳೆ ಸಂಜೆ ಐದು ಗಂಟೆಗೆ ಸಂಸದಿಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಕೆಲ ಎಂಎಲ್ ಸಿ(MLC) ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ  ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ನಿರ್ಧಾರವಾಗಲಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Exit mobile version