Site icon PowerTV

ನಮ್ಮ ನಡೆ ನಿಮ್ಮ ಮನೆ ಕಡೆ ಪ್ರಚಾರಕ್ಕೆ ಅಭೂತಪೂರ್ವ ಬೆಂಬಲ

ಮುಳಬಾಗಿಲು : ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರು ಹಮ್ಮಿಕೊಂಡಿರುವ ‘ನಮ್ಮ ನಡೆ ನಿಮ್ಮ ಮನೆ ಕಡೆ’ ಪ್ರಚಾರಕ್ಕೆ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

ಚುನಾವಣಾ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ಭರ್ಜರಿ ಮತ ಪ್ರಚಾರ ಆರಂಭಿಸಿರುವ ಸಮೃದ್ಧಿ ಮಂಜುನಾಥ್ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಭರದಿಂದ ಸಾಗಿದೆ.

ಬೈರಕೂರು ಪಂಚಾಯಿತಿ ವ್ಯಾಪ್ತಿಯ ಬಿ.ಕುರುಬರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಡೇನಹಳ್ಳಿ ನಾಗರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ನಮ್ಮ ನಡೆ ನಿಮ್ಮ ಮನೆಯ ಕಡೆ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಭಾಗವಹಿಸಿ ಮತ ಪ್ರಚಾರ ನಡೆಸಿದರು.

 

 

 

 

 

 

ಈ ವೇಳೆ ಮಾತನಾಡಿರುವ ಅವರು, ಈ ಬಾರಿ ತಮ್ಮ ಆಶೀರ್ವಾದ ನೀಡಿ ಬೆಂಬಲಿಸಿ. ಕುಮಾರಣ್ಣ ಮತ್ತೆ ಅಧಿಕಾರಕ್ಕೆ ಬರಲು ಬೆಂಬಲ ನೀಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಮುಖಂಡರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version