Site icon PowerTV

ಅಭ್ಯರ್ಥಿಗಳ ಫಸ್ಟ್‌ಲಿಸ್ಟ್‌ ರಿಲೀಸ್‌ಗೆ ಕೇಸರಿ ಪಡೆ ಕಸರತ್ತು

ನವದೆಹಲಿ: ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲಾ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಇನ್ನೂ ಚುನಾವಣೆ ಕಣಕ್ಕೆ ಎಲ್ಲಾ ಸಕಲ ಸಿದ್ಧತೆಗಳನ್ನು ನಡೆಸುತ್ತಿರುವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಕೆಲವು ಕಸರತ್ತುಗಳನ್ನು ನಡೆಸುತ್ತಿದ್ದೇವೆ.

ಇದನ್ನೂ ಓದಿ : ಚಿತ್ರನಟರು ಯಾಕೆ ಪ್ರಶ್ನೆ ಮಾಡುತ್ತಿಲ್ಲ : ಡಿಕೆಶಿ ಫುಲ್ ಗರಂ

ಹೌದು, ಈಗಾಗಲೇ ಕಾಂಗ್ರೆಸ್ ತನ್ನ ಎರಡನೇ ಪಟ್ಟಿ ಹಾಗೂ ಜೆಡಿಎಸ್ ಮೊದಲನೇ ಪಟ್ಟಿ ಬಿಡುಗಡೆ ಮಾಡಿದೆ ಅಂದ್ರೆ ಇನ್ನೂ ಪಟ್ಟಿ ರಿಲೀಸ್ ಮಾಡದ್ದೇ ಕೇಸರಿ ಪಡೆ ಹಲವಾರು ಕಸರತ್ತು ನಡೆಸುತ್ತಿದೆ.

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

ಕಮಲ ಪಡೆ ತನ್ನ ಮೊದಲ ಪಟ್ಟಿ ರಿಲೀಸ್ ಮಾಡಲು ಇಂದು ಸಕಲ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಕುರಿತು ಮತ್ತೆ ಹೈಕಮಾಂಡ್‌ನೊಂದಿಗೆ ಚರ್ಚಿಸಲು ದೆಹಲಿಯಲ್ಲಿ ಇಂದು ಬೆಳಗ್ಗೆ 10.30ಕ್ಕೆ ಮಹತ್ವದ ಸಭೆಯನ್ನು ನಡೆಸಲಿದೆ. ಹೀಗಾಗಿ ನಾಳೆಯೇ ಬಿಜೆಪಿಯಿಂದ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಇಂದೇ ಬಿಜೆಪಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ, BSY, ಅಮಿತ್‌ ಶಾ ಸೇರಿ ಹಲವರು ಭಾಗಿಯಾಗಲಿದ್ದಾರೆ.

 

Exit mobile version