Monday, August 25, 2025
Google search engine
HomeUncategorizedಏ.16ಕ್ಕೆ ಕೋಲಾರದಲ್ಲಿ ರಾಗಾ 'ಜೈ ಭಾರತ ಸತ್ಯಾಗ್ರಹ' : ಡಿ‌.ಕೆ ಶಿವಕುಮಾರ್

ಏ.16ಕ್ಕೆ ಕೋಲಾರದಲ್ಲಿ ರಾಗಾ ‘ಜೈ ಭಾರತ ಸತ್ಯಾಗ್ರಹ’ : ಡಿ‌.ಕೆ ಶಿವಕುಮಾರ್

ಬೆಂಗಳೂರು : ಏಪ್ರಿಲ್ 16ರಂದು ಕೋಲಾರದಲ್ಲಿ ರಾಹುಲ್ ಗಾಂಧಿಯವರ ‘ಜೈ ಭಾರತ ಸತ್ಯಾಗ್ರಹ ಯಾತ್ರೆ’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಹೌದು, ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿ (Rahul Gandhi) ಅವರು ಬೆಳಗಾವಿಗೆ ಬಂದು ನಮ್ಮ ಯುವನಿಧಿ ಯೋಜನೆ ಪ್ರಕಟಿಸಿ ಯುವ ಸಮುದಾಯಕ್ಕೆ ಸಂದೇಶ ರವಾನಿಸಿದ್ದರು. ರಾಹುಲ್ ಗಾಂಧಿ ಅವರಿಗೆ ಬಿಜೆಪಿಯವರು ಹೆದರಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಫಾರಿ ಉಡುಗೆ ತೊಟ್ಟು ಬಂಡೀಪುರಕ್ಕೆ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ 

ರಾಹುಲ್ ಗಾಂಧಿ ಅವರ ವರ್ಚಸ್ಸನ್ನು ಸಹಿಸಲಾರದೆ ಅವರ ಸಂಸತ್ತಿನ ಸದಸ್ಯತ್ವವನ್ನು ವಜಾಗೊಳಿಸಿದ್ದಾರೆ. ಒಂದು ಭಾಷಣದ ವಿಚಾರವಾಗಿ ಇದೇ ಮೊದಲ ಬಾರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ತೀರ್ಪು ಬಂದ 24 ಗಂಟೆಗಳಲ್ಲಿ ಅವರನ್ನು ಅನರ್ಹ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಯಾವುದೇ ಅರ್ಜಿ ಹಾಕದೇ, ನೋಟೀಸ್ ನೀಡದೇ, ಲೋಕಸಭೆ ಸ್ಪೀಕರ್ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು 7 ಲಕ್ಷಗಳ ಮತಗಳ ಅಂತರದಲ್ಲಿ ಗೆದ್ದ ನಾಯಕನ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಜಕಾರಣ ನಿಂತ ನೀರಲ್ಲ. ಎಲ್ಲವೂ ಪುನರಾವರ್ತನೆಯಾಗಲಿದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಭವಾನಿಗೆ ನಿರಾಸೆ, ‘ಹಾಸನ ಟಿಕೆಟ್ ಸ್ವರೂಪ್ ಗೌಡ’ಗೇ ಫಿಕ್ಸ್..?

ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಭಾಷಣ ಮಾಡಬೇಕು ಎಂದು ಹೇಳಿದಾಗ ನಾವು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ. ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದು, ಅದಕ್ಕೆ ರಾಹುಲ್ ಗಾಂಧಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಜೈ ಭಾರತ ಸತ್ಯಾಗ್ರಹ ಯಾತ್ರೆಯನ್ನು ಏ.16ರಂದು ಆಯೋಜಿಸಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments