Site icon PowerTV

ಬಿಜೆಪಿಯ 25 ಶಾಸಕರು, ಸಚಿವರಿಗೆ ಟಿಕೆಟ್ ಮಿಸ್ : ಲೀಸ್ಟ್ ನಲ್ಲಿ ಯಾರೆಲ್ಲ ಇದ್ದಾರೆ ಗೊತ್ತಾ?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಟಿಕೆಟ್ ಫೈನಲ್ ಮಾಡಲಿದ್ದು, ಈ ಬಾರಿ ಬಿಜೆಪಿಯ 25 ಹಾಲಿ ಶಾಸಕರು ಹಾಗೂ ಸಚಿವರಿಗೆ ಟಿಕೆಟ್ ಮಿಸ್ ಆಗಲಿದೆ ಎಂದು ತಿಳಿದುಬಂದಿದೆ.

ಹೌದು, ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ಗೆ ಕೆಲ ಕೇಸರಿ ಕಲಿಗಳಿಗೆ ನಡುಕ ಹುಟ್ಟಿದೆ. ಪಕ್ಷ ನಿಷ್ಠವಲ್ಲದ, ಭ್ರಷ್ಟಾಚಾರದಲ್ಲಿ ಹೆಸರು ತಳಕು ಹಾಕಿಕೊಂಡ, ವಯಸ್ಸಿನ ಕಾರಣ, ವರ್ಚಸ್ಸು ಕಳೆದುಕೊಂಡಿರುವ, ಆಡಳಿತ ವಿರೋಧಿ ಅಲೆ ಹಾಗೂ ಇನ್ನಿತರ ಕಾರಣಗಳಿಂದ ಕೆಲವು ಹಾಲಿ ಶಾಸಕರು ಹಾಗೂ ಸಚಿವರಿಗೆ ಗೇಟ್ ಪಾಸ್ ನೀಡಲು ವರಿಷ್ಠರು ತೀರ್ಮಾನಿಸಿದ್ದಾರೆ.

ಭ್ರಷ್ಟಾಚಾರದ ಆರೋಪ ಹೊತ್ತು ಜೈಲಿನಲ್ಲಿರುವ ಚನ್ನಗಿರಿ ಕ್ಷೇತ್ರದ ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ, ಸೊರಬಾ ಕ್ಷೇತ್ರದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡದೇ ಇರಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಎಸ್.ಸುರೇಶ್ ಕುಮಾರ್, ಶಾಸಕ ರವಿಸುಬ್ರಹ್ಮಣ್ಯ ಅವರಿಗೂ ಟಿಕೆಟ್ ತಪ್ಪುವ ಭೀತಿ ಎದುರಾಗಿದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜಿ.ಎಚ್.ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್ ಅವರಿಗೂ ಈ ಬಾರಿ ಬಿಜೆಪಿಯಿಂದ ಟಿಕೆಟ್ ಮಿಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮಗನಿಗೆ ಟಿಕೆಟ್​ ಕೊಡಿಸಲು ವಿ ಸೋಮಣ್ಣ ಸರ್ಕಸ್​ 

ಯಾರಿಗೆಲ್ಲಾ ಟಿಕೆಟ್ ಸಿಗೋದು ಡೌಟ್?

Exit mobile version