Site icon PowerTV

ರಾಮನಗರದಲ್ಲಿ 38 ಲಕ್ಷ, ಮಂಡ್ಯದಲ್ಲಿ ಬರೋಬ್ಬರಿ 1 ಕೋಟಿ ಮೌಲ್ಯದ ವಸ್ತುಗಳು ವಶ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರ್ಚ್​ 29ರಿಂದ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಹಲವು ಕಡೆ ಚೆಕ್​ಪೋಸ್ಟ್​​ಗಳಲ್ಲಿ ಅಪಾರ ಪ್ರಮಾಣದ ನಗದು, ಮದ್ಯ, ಉಡುಗೊರೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ಚುನಾವಣಾ ‌ನೀತಿ ಸಂಹಿತೆ ಜಾರಿ ಹಿನ್ನಲೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಜಗದಾಪುರ ಬಳಿ ಇರುವ ಚೆಕ್ ಪೋಸ್ಟ್ ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ಹಣವನ್ನು ಚುನಾವಣಾ ಅಧಿಕಾರಗಳು ವಶಕ್ಕೆ ಪಡೆದಿದ್ದಾರೆ.

ಜಗದಾಪುರ ಚೆಕ್​ ಪೋಸ್ಟ್​ನಲ್ಲಿ ವಾಹನ ತಪಾಸಣೆ ವೇಳೆ ಜಪ್ತಿ ಮಾಡಲಾಗಿದೆ. ಹಲಗೂರಿನಿಂದ ಚನ್ನಪಟ್ಟಣ ಮಾರ್ಗವಾಗಿ ಬರುತ್ತಿದ್ದ ಯಲ್ಲೊ ಬೋರ್ಡ್ ಸ್ವಿಪ್ಟ್ ಕಾರ್​ನಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮೊತ್ತ ಸೀಜ್ ಹಿನ್ನೆಲೆ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಐಟಿ ಅಧಿಕಾರಿಗಳಿಂದ ಹಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸೀಜ್​ ಮಾಡಿದ್ದಾರೆ.

ಇದನ್ನೂ ಓದಿ : ವರುಣಾ, ಶಿಕಾರಿಪುರದಲ್ಲಿ ‘ಮ್ಯಾಚ್ ಫಿಕ್ಸಿಂಗ್’ : ಡಿಕೆಶಿ ಹೇಳಿದ್ದೇನು?

1 ಕೋಟಿ ಮೌಲ್ಯದ ವಸ್ತುಗಳು ವಶ

ಮಂಡ್ಯ ಜಿಲ್ಲೆಯಲ್ಲಿ ನಗದು ಸೇರಿ 1 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಮಾಹಿತಿ ನೀಡಿದ್ದು, ದಾಖಲೆ ಇಲ್ಲದ ನಗದು, ಮದ್ಯ, ಡ್ರಗ್ಸ್​​​ ಸೇರಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದು, 1 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವಾರ 56.61 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. ಈ ವಾರ ನಗದು ಸೇರಿ 1.12 ಕೋಟಿ ಮೌಲ್ಯದ ವಸ್ತುಗಳ ಜಪ್ತಿ ಆಗಿವೆ. ಮಂಡ್ಯ ಜಿಲ್ಲೆಯಾದ್ಯಂತ 7 ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Exit mobile version