Site icon PowerTV

ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ವಿ.ಶ್ರೀನಿವಾಸ ಪ್ರಸಾದ್

ಚಾಮರಾಜನಗರ: ಚುನಾವಣೆಯ ಕಾವು ಎಲ್ಲೆಡೆ ಪ್ರಭಾವ ಬೀರುತ್ತಿರುವ ಬೆನ್ನೇಲೇ ಕೆಸರಿ ಪಡೆಗೆ ಶಾಕ್​ ಮೇಲೆ ಶಾಕ್​ ಎದುರಗುತ್ತಿದೆ.

ಹೌದು ಹುಟ್ಟಹಬ್ಬದ ದಿನವೇ ಮುತ್ಸದ್ದಿ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಗುಂಡ್ಲುಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಶ್ರೀನಿವಾಸ ಪ್ರಸಾದ್ ರಾಜಕೀಯಕ್ಕೆ ಗುಡ್‌ ಬೈ ಹೇಳೀದ್ದಾರೆ.

ಚುನಾವಣೆ ರಾಜೀನಾಮೆ ಘೋಷಿಸಿದ ಸಂಸದ ಶ್ರೀನಿವಾಸ ಪ್ರಸಾದ್ ನಾನು ಇದುವರೆಗೆ 14 ಚುನಾವಣೆ ಎದುರಿಸಿದ್ದೇನೆ. 12ನೇ ಚುನಾವಣೆಯೇ ಸಾಕಾಗಿತ್ತು. ಕಂದಾಯ ಸಚಿವನಾಗಿ ಅವಧಿ ಪೂರ್ಣಗೊಳಿಸಲು ಎರಡು ವರ್ಷ ಅವಕಾಶ ನೀಡಿದ್ದರೆ ಸಾಕಿತ್ತು. ಆದರೆ ಅನಿವಾರ್ಯವಾಗಿ ಮತ್ತೆರಡು ಚುನಾವಣೆ ಎದುರಿಸಬೇಕಾಯ್ತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಅದೇ ನನ್ನ ಕೊನೆಯ ಚುನಾವಣೆ ಆಗುತ್ತಿತ್ತು. ಇದುವರೆಗಿನ ರಾಜಕೀಯ ಜೀವನದ ಬಗ್ಗೆ ತೃಪ್ತಿ ಇದೆ. ಚುನಾವಣಾ ರಾಜಕಾರಣ ನನಗೆ ಸಾಕಾಗಿದೆ. ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು.

 

 

Exit mobile version